ಚಿಕ್ಕಮಗಳೂರು: ವಿಚಿತ್ರ ಕಾಯಿಲೆಯಿಂದ ಬಳಲುತ್ತಿರುವ ಬಾಲಕನ ಮನೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

TV9 Web
| Updated By: ವಿವೇಕ ಬಿರಾದಾರ

Updated on:Aug 12, 2022 | 7:47 PM

ಚಿಕ್ಕಮಗಳೂರು ಜಿಲ್ಲೆಯ, ಮೂಡಿಗೆರೆ ತಾಲೂಕಿನ ಬಿರಗೂರು ಗ್ರಾಮದಲ್ಲಿ ವಿಚಿತ್ರ ಕಾಯಿಲೆಯಿಂದ ಬಳಲುತ್ತಿರುವ ಬಾಲಕ ರಿತ್ವಿಕ್ ಮನೆಗೆ ಇಂದು ಆಗಸ್ಟ್​ 12 ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿದ್ದಾರೆ.

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ, ಮೂಡಿಗೆರೆ ತಾಲೂಕಿನ ಬಿರಗೂರು ಗ್ರಾಮದಲ್ಲಿ ವಿಚಿತ್ರ ಕಾಯಿಲೆಯಿಂದ ಬಳಲುತ್ತಿರುವ ಬಾಲಕ ರಿತ್ವಿಕ್ ಮನೆಗೆ ಇಂದು ಆಗಸ್ಟ್​ 12 ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿದ್ದಾರೆ. ಈ ವೇಳೆ ಥಲಸ್ಸೇಮಿಯಾ ಕಾಯಿಲೆಯಿಂದ ಬಳಲುತ್ತಿರುವ ಬಾಲಕ ರಿತ್ವಿಕ್ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ. ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದಿಂದ ಬಾಲಕನ ಚಿಕಿತ್ಸೆಗೆ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಮೂಡಿಗೆರೆ ತಾಲೂಕಿನ ಕೆ.ತಲಗೂರು ಗ್ರಾಮದಲ್ಲಿ ಮರ ಬಿದ್ದು ಸಾವನ್ನಪ್ಪಿದ್ದ ಇಬ್ಬರು ಮಹಿಳೆಯರ ಮನೆಗಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿದ್ದಾರೆ. ಈ ವೇಳೆ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ತಲಾ 5 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಿದ್ದಾರೆ.

ಮೂಡಿಗೆರೆ ತಾಲೂಕಿನ ಕೆ.ತಲಗೂರು ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದು ಸರಿತಾ(37), ಚಂದ್ರಮ್ಮ(55) ಮೃತಪಟ್ಟಿದ್ದರು. ಘಟನೆಗೂ ಮುನ್ನ ಮಹಿಳೆಯರು ಮರ ತೆರವಿಗೆ ಮನವಿ ಮಾಡಿದ್ದರು. ಆದರೂ ಕೂಡ ಅರಣ್ಯ ಅಧಿಕಾರಿಗಳು ಮರ ತೆರವುಗೊಳಿಸದ ಹಿನ್ನೆಲೆ ಅಧಿಕಾರಿಗಳ ವಿರುದ್ಧ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 12, 2022 06:03 PM