Road shows in Dharwad: ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ
ಮೊನ್ನೆಯಷ್ಟೇ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಸರ್ಮ ಅವರು ಕೊಪ್ಪಳಕ್ಕೆ ಆಗಮಿಸಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ಹುಬ್ಬಳ್ಳಿ: ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲು ಕೇಂದ್ರ ಸಚಿವೆ ಸ್ನೃತಿ ಇರಾನಿ (Smriti Irani) ವಿಶೇಷ ವಿಮಾನವೊಂದರಲ್ಲಿ ಹುಬ್ಬಳ್ಳಿಗೆ ಆಗಮಿಸಿದರು. ಇಂದು ಧಾರವಾಡ ಜಿಲ್ಲೆಯ ಅಣ್ಣಿಗೇರಿ ಹಾಗೂ ನವಲಗುಂದದಲ್ಲಿ ನಡೆಯಲಿರುವ ರೋಡ್ ಶೋಗಳಲ್ಲಿ ಅವರು ಭಾಗಿಯಾಗಲಿದ್ದಾರೆ. ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಪಕ್ಷದ ಹೈಕಮಾಂಡ್ ಕೇಂದ್ರದ ನಾಯಕರನ್ನು ಒಬ್ಬೊಬ್ಬರನ್ನಾಗಿ ಕರ್ನಾಟಕಕ್ಕೆ ಕಳಿಸುತ್ತಿದೆ. ಮೊನ್ನೆಯಷ್ಟೇ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಸರ್ಮ (Himanta Biswa Sarma) ಅವರು ಕೊಪ್ಪಳಕ್ಕೆ ಆಗಮಿಸಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಂತೂ (PM Narendra Modi) ಪದೇಪದೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಹಾಗೆಯೇ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಆಗಾಗ ಬರುತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 16, 2023 01:00 PM
Latest Videos