ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಸೋಮಣ್ಣ ಚಾಲನೆ, ಇಲ್ಲಿದೆ ಟ್ರೈನ್​ ಸಮಯ

| Updated By: ವಿವೇಕ ಬಿರಾದಾರ

Updated on: Sep 27, 2024 | 1:03 PM

ವಂದೇ ಭಾರತ್​ ರೈಲು ನಿಲುಗಡೆ ನಂತರ ಕೇಂದ್ರ ಸಚಿವ ವಿ. ಸೋಮಣ್ಣ ತುಮಕೂರಿಗೆ ಮತ್ತೊಂದು ಗಿಫ್ಟ್​ ಕೊಟ್ಟಿದ್ದಾರೆ. ರಾಜ್ಯ ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ ಅವರು ಶುಕ್ರವಾರ ತುಮಕೂರು-ಯಶವಂತಪುರ ಮೆಮು ರೈಲಿಗೆ ಚಾಲನೆ ನೀಡಿದರು.

ತಮಕೂರು, ಸೆಪ್ಟೆಂಬರ್​ 27: ರಾಜ್ಯ ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ (V. Somanna) ಅವರು ಇಂದು (ಸೆ.27) ತುಮಕೂರು-ಯಶವಂತಪುರ ಮೆಮು (Tumkur-Yeshwanthpur Memu) ರೈಲಿಗೆ ಚಾಲನೆ ನೀಡಿದರು. ಇದೇ ವೇಳೆ ತುಮಕೂರು ಜನತೆಗೆ ಮತ್ತೊಂದು ಸಿಹಿ ಸುದ್ದಿ​ ನೀಡಿದರು. ತುಮಕೂರು-ಯಶವಂತಪುರ ಜೊತೆಗೆ ಬಾಣಸವಾಡಿ-ತುಮಕೂರು ನಡುವೆ ಹೊಸ ಮೆಮು ರೈಲು ಸೇವೆ ಆರಂಭವಿಸುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ಸಂಸದ ಜಿ.ಎಸ್. ಬಸವರಾಜ್, ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್, ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು, ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಶಾಸಕ ಎಚ್.ನಿಂಗಪ್ಪ ಸೇರಿದಂತೆ ರೈಲ್ವೇ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.

ಮೆಮು ರೈಲು ಸಂಚರಿಸುವ ಸಮಯ

ತುಮಕೂರು-ಯಶವಂತಪುರ ನಡುವಿನ ಹೊಸ ಮೆಮು ರೈಲು ಇವತ್ತಿನಿಂದಲೇ ಕಾರ್ಯಾರಂಭ ಮಾಡಿದೆ. ಈ ಮೆಮು ರೈಲು ಭಾನುವಾರ ಹೊರತುಪಡಿಸಿ ವಾರದ ಎಲ್ಲ ದಿನ ಸಂಚರಿಸಲಿದೆ.

ರೈಲು ಸಂಖ್ಯೆ 06201: ತುಮಕೂರು-ಯಶವಂತಪುರ ಮೆಮು ರೈಲು ಪ್ರತಿದಿನ ಬೆಳಿಗ್ಗೆ 8.45ಕ್ಕೆ ತುಮಕೂರಿನಿಂದ ಹೊರಟು 10.25ಕ್ಕೆ ಯಶವಂತಪುರ ತಲುಪಲಿದೆ.

ರೈಲು ಸಂಖ್ಯೆ 06202: ಯಶವಂತಪುರ-ತುಮಕೂರು ಮೆಮು ರೈಲು ಸಂಜೆ 5.40ಕ್ಕೆ ಯಶವಂತಪುರದಿಂದ ಹೊರಟು ಸಂಜೆ 7.05ಕ್ಕೆ ತುಮಕೂರು ತಲುಪಲಿದೆ.

ತುಮಕೂರು-ಬಾಣಸವಾಡಿ

ಸೆಪ್ಟೆಂಬರ್​ 30 ರಿಂದ ಆರಂಭವಾಗಲಿರುವ ತುಮಕೂರು-ಬಾಣಸವಾಡಿ ಮೆಮು ರೈಲು ಸಂಚಾರ ಆರಂಭವಾಗಲಿದೆ. ಈ ಮೆಮು ರೈಲು ಸೋಮವಾರ ಮಾತ್ರ ಕಾರ್ಯನಿರ್ವಹಿಸಲಿದೆ.

ರೈಲು ಸಂಖ್ಯೆ 06205: ಬಾಣಸವಾಡಿ-ತುಮಕೂರು ಮೆಮು ರೈಲು ಪ್ರತಿ ಸೋಮವಾರ ಬೆಳಿಗ್ಗೆ 6.15ಕ್ಕೆ ಬಾಣಸವಾಡಿಯಿಂದ ಹೊರಟು ಬೆಳಿಗ್ಗೆ 8.35ಕ್ಕೆ ತುಮಕೂರು ತಲುಪಲಿದೆ.

ರೈಲು ಸಂಖ್ಯೆ 06205: ತುಮಕೂರು-ಬಾಣಸವಾಡಿ ಮೆಮು ರೈಲು ಪ್ರತಿ ಶನಿವಾರ ಸಂಜೆ 7.40ಕ್ಕೆ ತುಮಕೂರಿನಿಂದ ಹೊರಟು ರಾತ್ರಿ 10.05ಕ್ಕೆ ಬಾಣಸವಾಡಿ ತಲುಪಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us on