ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಣ್ಣಿನ ಹಾರಕ್ಕಾಗಿ ಮುಗಿಬಿದ್ದ ಜನ!

Updated on: Sep 13, 2024 | 4:24 PM

ಇಂದು ಮೈಸೂರಿಗೆ ಆಗಮಿಸಿದ ಕೇಂದ್ರ ಸಚಿವ ವಿ. ಸೋಮಣ್ಣ ಅವರಿಗೆ ಬಿಜೆಪಿ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದರು. ಈ ವೇಳೆ ಕ್ರೇನ್ ಮೂಲಕ ಬೃಹತ್ ಗಾತ್ರದ ಸೇಬು ಹಣ್ಣಿನ ಹಾರ ಹಾಕಿ ವಿ. ಸೋಮಣ್ಣನವರನ್ನು ಸ್ವಾಗತಿಸಿದರು. ಆ ಸೇಬು ಹಣ್ಣಿನ ಹಾರಕ್ಕೆ ಅಲ್ಲಿದ್ದ ಜನರು ಮುಗಿಬಿದ್ದರು.

ಮೈಸೂರು: ಮೈಸೂರು ಜಿಲ್ಲಾ ಪ್ರವಾಸಕ್ಕಾಗಿ ಇಂದು ಆಗಮಿಸಿದ್ದ ಕೇಂದ್ರ ಸಚಿವ ವಿ. ಸೋಮಣ್ಣ ಅವರನ್ನು ಬೃಹತ್ ಸೇಬು ಹಣ್ಣಿನ ಹಾರದೊಂದಿಗೆ ಸ್ವಾಗತಿಸಲಾಯಿತು. ಈ ವೇಳೆ ಆ ಹಾರದಲ್ಲಿದ್ದ ಸೇಬು ಹಣ್ಣುಗಳನ್ನು ಕಿತ್ತುಕೊಳ್ಳಲು ಅಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಮುಗಿಬಿದ್ದರು. ಕ್ಷಣಮಾತ್ರದಲ್ಲಿ ಆ ಹಾರದಲ್ಲಿದ್ದ ಹಣ್ಣುಗಳು ಕೆಳಗೆ ಬಿದ್ದು ಚೆಲ್ಲಾಪಿಲ್ಲಿಯಾಗಿ ಹಾರದಲ್ಲಿ ದಾರ ಮಾತ್ರ ಉಳಿದಿತ್ತು.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 13, 2024 04:22 PM
Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More