ಮುಖ್ಯಮಂತ್ರಿಯವರನ್ನು ಯಾರಾದರೂ ಮುಟ್ಟಲು ಸಾಧ್ಯವೇ ಅಂತ ವ್ಯಂಗ್ಯವಾಡಿದ ವಿ ಸೋಮಣ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: Nov 14, 2024 | 12:17 PM

ರೇಲ್ವೇ ಖಾತೆಯ ಸಹಾಯಕ ಸಚಿವರೂ ಆಗಿರುವ ಸೋಮಣ್ಣ ಮುಂದಿನ ತಿಂಗಳು ಬೆಳಗಾವಿಯಿಂದ ಸ್ಲೀಪಿಂಗ್ ಕೋಚ್ ಲಭ್ಯವಾಗಲಿದೆ ಎಂದು ಹೇಳಿದರು. ಬೆಳಗಾವಿ-ಪುಣೆ ನಡುವೆ ಒಂದು ವಂದೇ ಭಾರತ್ ಟ್ರೈನನ್ನು ಆರಂಭಿಸಲಾಗಿದೆ ಎಂದ ಅವರು ಬೆಳಗಾವಿ ಜನರ ಅವಶ್ಯಕತೆಗಳಿಗೆ ಅನುಗುಣವಾಗಿ ರೈಲುಗಳ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಬೆಳಗಾವಿ: ಮುಖ್ಯಮಂತ್ರಿಯವರನ್ನು ಯಾರಾದರೂ ಮುಟ್ಟುವುದು ಸಾಧ್ಯವೇ? ಅವರನ್ನು ಮುಟ್ಟಿದರೆ ಪೊಲೀಸರು ಹಿಡಿದು ಕೇಸ್ ಹಾಕುತ್ತಾರೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ವ್ಯಂಗ್ಯವಾಡಿದರು. ಅವರೊಬ್ಬ ಹಿರಿಯ ಮತ್ತು ಅನುಭವಿ ರಾಜಕಾರಣಿ ಹಾಗೂ ಎರಡು ಸಲ ಮುಖ್ಯಮಂತ್ರಿಯಾಗಿರುವವರು, ಅವರಾಡುವ ಮಾತು ಜನಸಾಮಾನ್ಯರಿಗೆ ಸ್ಪಂದಿಸುವಂತಿರಬೇಕು, ಜನರ ಭಾವನೆಗಳಿಗೆ ತದ್ವಿರುದ್ಧವಾಗಿ ಅವರು ಮಾತಾಡಬಾರದು, ಮೈಸೂರಲ್ಲಿ ಆಡಿದ ಮಾತು ಅವರ ವಿವೇಚನೆಗೆ ಬಿಟ್ಟಿದ್ದು ಎಂದು ಸೋಮಣ್ಣ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಮೇಕೆದಾಟು ಬಗ್ಗೆ ಕೇಂದ್ರ ಜಲಶಕ್ತಿ ಮಂತ್ರಿ ವಿ ಸೋಮಣ್ಣ ಹೇಳಿದ್ದೇನು?

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.