ಕೇಂದ್ರ ಸಚಿವರು ವಕ್ಫ್ ಹೋರಾಟದಲ್ಲಿ ಭಾಗವಹಿಸಿದ್ದು ಪರ್ಯಾಯ ನಾಯಕತ್ವ ಸೃಷ್ಟಿಸಲಲ್ಲ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಎಲ್ಲರನ್ನೂ ಟೀಕಿಸುತ್ತಾರೆ, ಜಗಜ್ಯೋತಿ ಬಸವೇಶ್ವರ ಅವರನ್ನೂ ಬಿಡುತ್ತಿಲ್ಲ, ತಮ್ಮ ಹರಕು ಬಾಯಿಯನ್ನು ಅವರು ನಿಲ್ಲಿಸಬೇಕು, ಪಕ್ಷದ ಬ್ಯಾನರ್ ಅಡಿ ಅವರಿಗೆ ಹೋರಾಟ ಮಾಡಲು ಮತ್ತು ಪಕ್ಷದ ಚಿಹ್ನೆಯನ್ನು ಬಳಸಲು ಅವರಿಗೆ ಅನುಮತಿ ನೀಡಿದ್ದು ಯಾರೆಂದು ರೇಣುಕಾಚಾರ್ಯ ಪ್ರಶ್ನಿಸಿದರು.
ಬೆಂಗಳೂರು: ವಕ್ಫ್ ವಿರುದ್ಧ ಹೋರಾಟ ನಡೆಸುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ರಾಷ್ಟ್ರೀಯ ನಾಯಕರು ಮುಲಾಜಿಲ್ಲದೆ ಪಕ್ಷದಿಂದ ಉಚ್ಛಾಟಿಸಬೇಕು ಎಂದು ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದರು. ನಗರದಲ್ಲಿ ಮಾಧ್ಯಮ ಗೋಷ್ಠಿ ನಡೆಸಿ ಮಾತಾಡಿದ ಅವರು, ಕೇಂದ್ರದಲ್ಲಿ ಮಂತ್ರಿಗಳಾಗಿರುವ ಶೋಭಾ ಕರಂದ್ಲಾಜೆ ಮತ್ತು ಪ್ರಲ್ಹಾದ್ ಜೋಶಿಯವರು ವಕ್ಫ್ ಹೋರಾಟದಲ್ಲಿ ಭಾಗಿಯಾಗಿದ್ದರೇ ಹೊರತು ಸ್ವಯಂಘೋಷಿತ ಹಿಂದೂ ನಾಯಕ ರಾಜ್ಯದಲ್ಲಿ ಪರ್ಯಾಯ ನಾಯಕತ್ವ ಸೃಷ್ಟಿಸಲಿ ಅಂತಲ್ಲ ಎಂದ ಅವರು ಯತ್ನಾಳ್ ಹೆಸರು ಉಲ್ಲೇಖಿಸದೆ, ಅವರು ಪಕ್ಷದ ರಾಷ್ಟ್ರೀಯ ನಾಯಕರನ್ನು ಪ್ರಶ್ನಿಸುವಷ್ಟು ಉದ್ಧಟತನ ಪ್ರದರ್ಶಿಸುತ್ತಿದ್ದಾರೆ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಬಿಜೆಪಿ ಸೋಲಿಗೆ ಯತ್ನಾಳ್ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ