ಅಸ್ಸಾಂನಲ್ಲಿ ಪ್ರವಾಹದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್, ಕಿರಣ್ ರಿಜಿಜು

Updated on: Jul 01, 2026 | 11:13 PM

ಪರಿಶೀಲನೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, "ಈ ಪ್ರದೇಶವು ಭಾರಿ ವಿನಾಶಕ್ಕೆ ಸಾಕ್ಷಿಯಾಗಿದೆ. ನದಿಯು ತನ್ನ ಹರಿವಿನ ಹಾದಿಯನ್ನು ಬದಲಾಯಿಸಿದ್ದರಿಂದ ಮನೆಗಳು, ಗೃಹೋಪಯೋಗಿ ಆಸ್ತಿಪಾಸ್ತಿಗಳು, ಬೆಳೆಗಳು ಮತ್ತು ವಿದ್ಯುತ್ ಮೂಲಸೌಕರ್ಯಗಳು ಸಂಪೂರ್ಣವಾಗಿ ನಾಶವಾಗಿವೆ. ಈ ಬಿಕ್ಕಟ್ಟಿನ ಪ್ರಮಾಣವು ಅತ್ಯಂತ ಗಂಭೀರವಾಗಿದೆ" ಎಂದು ಹೇಳಿದರು.

ಧೇಮಾಜಿ, ಜುಲೈ 1: ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಇಂದು ಅಸ್ಸಾಂನ ಪ್ರವಾಹ (Assam Flood) ಪೀಡಿತ ಧೇಮಾಜಿ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ವೇಳೆ ಪ್ರವಾಹ ಸಂತ್ರಸ್ತರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಮಾಹಿತಿ ಪಡೆದರು. ಅಸ್ಸಾಂ ಮತ್ತು ಅರುಣಾಚಲ ಪ್ರದೇಶದ ಇತ್ತೀಚಿನ ಪ್ರವಾಹ ಪರಿಸ್ಥಿತಿಯ ಪರಾಮರ್ಶೆ ನಡೆಸಲು ಈಶಾನ್ಯ ರಾಜ್ಯಗಳ ಪ್ರವಾಸದಲ್ಲಿರುವ ಕೇಂದ್ರ ಸಚಿವರಿಬ್ಬರೂ ಇಂದು ಧೇಮಾಜಿ ಜಿಲ್ಲೆಯ ಅತ್ಯಂತ ತೀವ್ರವಾಗಿ ತತ್ತರಿಸಿರುವ ‘ಅರುಣ್ ಚಾಪೋರಿ’ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, “ಈ ಪ್ರದೇಶವು ಭಾರಿ ವಿನಾಶಕ್ಕೆ ಸಾಕ್ಷಿಯಾಗಿದೆ. ನದಿಯು ತನ್ನ ಹರಿವಿನ ಹಾದಿಯನ್ನು ಬದಲಾಯಿಸಿದ್ದರಿಂದ ಮನೆಗಳು, ಗೃಹೋಪಯೋಗಿ ಆಸ್ತಿಪಾಸ್ತಿಗಳು, ಬೆಳೆಗಳು ಮತ್ತು ವಿದ್ಯುತ್ ಮೂಲಸೌಕರ್ಯಗಳು ಸಂಪೂರ್ಣವಾಗಿ ನಾಶವಾಗಿವೆ. ಈ ಬಿಕ್ಕಟ್ಟಿನ ಪ್ರಮಾಣವು ಅತ್ಯಂತ ಗಂಭೀರವಾಗಿದೆ” ಎಂದು ಹೇಳಿದರು.

ರಾಜ್ಯ ಸರ್ಕಾರ ಮತ್ತು ಸಂತ್ರಸ್ತ ಜನರಿಗೆ ಕೇಂದ್ರ ಸರ್ಕಾರವು ಸಂಪೂರ್ಣ ಬೆಂಬಲ ನೀಡಲಿದೆ ಎಂದು ಅವರು ಭರವಸೆ ನೀಡಿದರು. ಅಲ್ಲದೆ, ಈ ಪ್ರದೇಶದಲ್ಲಿ ಪ್ರತಿ ವರ್ಷ ಎದುರಾಗುವ ಪ್ರವಾಹ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಮಗ್ರ ದೀರ್ಘಕಾಲೀನ ಕಾರ್ಯತಂತ್ರವನ್ನು ರೂಪಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಒತ್ತಿಹೇಳಿದರು.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More