ಡೊನಾಲ್ಡ್ ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಇಂದು (ಸೋಮವಾರ) ಅಮೆರಿಕದ 47ನೇ ಅಧ್ಯಕ್ಷರಾಗಿ ಐತಿಹಾಸಿಕ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರ ಜೊತೆ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಮೆರಿಕಕ್ಕೆ ಹೊಸ "ಸುವರ್ಣಯುಗ"ದ ಭರವಸೆ ನೀಡಿರುವ ಟ್ರಂಪ್, ಭಾರತೀಯ ಕಾಲಮಾನದ ಪ್ರಕಾರ ಇಂದು ರಾತ್ರಿ 10.30ಕ್ಕೆ (ಅಮೆರಿಕದ ಕಾಲಮಾನದ ಪ್ರಕಾರ ಮಧ್ಯಾಹ್ನ 12 ಗಂಟೆಗೆ) ಯುಎಸ್ ಕ್ಯಾಪಿಟಲ್ ಕಟ್ಟಡದ ರೋಟುಂಡಾದಲ್ಲಿ ನಡೆಯುವ ಒಳಾಂಗಣ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಅಮೆರಿಕದ ಅಧ್ಯಕ್ಷರಾಗಿ ಚುನಾಯಿತರಾಗಿರುವ ಡೊನಾಲ್ಡ್ ಟ್ರಂಪ್ 2ನೇ ಅವಧಿಗೆ ಇಂದು ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅಮೆರಿಕದ ಕಾಲಮಾನದ ಪ್ರಕಾರ ಮಧ್ಯಾಹ್ನ 12.30ಕ್ಕೆ (ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 10.30ಕ್ಕೆ) ಟ್ರಂಪ್ ಅಮೆರಿಕ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರಲ್ಲಿ ಪಾಲ್ಗೊಳ್ಳಲು ಮುಂಜಾನೆಯಿಂದಲೇ ಜನರು ಕಿಕ್ಕಿರಿದು ಸೇರಿದ್ದಾರೆ. ಭಾರತ ಸರ್ಕಾರದ ಪರವಾಗಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅಮೆರಿಕದಲ್ಲಿ ನಡೆಯಲಿರುವ ಡೊನಾಲ್ಡ್ ಟ್ರಂಪ್ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ಮೊದಲ ಬಾರಿಗೆ ಟ್ರಂಪ್ ಬೇರೆ ದೇಶಗಳ ನಾಯಕರನ್ನು ಅಮೆರಿಕದ ಅಧ್ಯಕ್ಷರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ