ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅಪರೂಪದ ಅಪ್ಪುಗೆ, ಬ್ರೇಕ್​ಫಾಸ್ಟ್ ಮೀಟಿಂಗ್ ಎಕ್ಸ್​ಕ್ಲೂಸಿವ್ ದೃಶ್ಯ ಇಲ್ಲಿದೆ

Updated on: May 28, 2026 | 11:12 AM

ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಬ್ರೇಕ್ಫಾಸ್ಟ್ ಮೀಟಿಂಗ್ ಪಕ್ಷದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡುವ ಸುಳಿವು ನೀಡಿದೆ. ಡಿ.ಕೆ. ಶಿವಕುಮಾರ್ ಸಿದ್ದರಾಮಯ್ಯನವರ ಪಾದಸ್ಪರ್ಶ ಮಾಡಿ ಆತ್ಮೀಯವಾಗಿ ತಬ್ಬಿಕೊಂಡಿದ್ದು, ಈ ಚಿತ್ರಗಳು ಒಂದು ಸಾವಿರ ಪದಗಳಿಗೆ ಸಮ ಎನಿಸಿವೆ.

ಬೆಂಗಳೂರು, ಮೇ 28: ರಾಜ್ಯ ರಾಜಕಾರಣದಲ್ಲಿ ಬಹು ನಿರೀಕ್ಷಿತ ನಾಯಕತ್ವ ಬದಲಾವಣೆ ಚರ್ಚೆ ನಡುವೆ ಸಿಎಂ ಸಿದ್​ದರಾಮಯ್ಯ ಕರೆದಿರುವ ಬ್ರೇಕ್ಫಾಸ್ಟ್ ಮೀಟಿಂಗ್ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಸಿದ್ದರಾಮಯ್ಯನವರ ನಿವಾಸ ಕಾವೇರಿಯಲ್ಲಿ ನಡೆದ ಈ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯನವರ ಪಾದಸ್ಪರ್ಶ ಮಾಡಿ ನಂತರ ಆತ್ಮೀಯವಾಗಿ ಆಲಿಂಗಿಸಿಕೊಂಡರು. ಸಿದ್ದರಾಮಯ್ಯನವರು ನಗುಮುಖದಿಂದ ಕಾಣಿಸಿಕೊಂಡರೆ, ಡಿ.ಕೆ. ಶಿವಕುಮಾರ್ ತುಸು ಭಾವುಕರಾಗಿದ್ದಂತೆ ಕಂಡುಬಂದರು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಇಬ್ಬರೂ ನಾಯಕರು ಯಾವುದೇ ಸಿಬ್ಬಂದಿಯಿಲ್ಲದೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು. ಈ ಮಾತುಕತೆ ರಾಜ್ಯದ ರಾಜಕೀಯ ಬೆಳವಣಿಗೆಗಳು, ಅಧಿಕಾರ ಹಂಚಿಕೆ ಮತ್ತು ಮುಂದಿನ ಯೋಜನೆಗಳ ಕುರಿತು ಕೇಂದ್ರೀಕೃತವಾಗಿತ್ತು ಎನ್ನಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More