Rains in Chitradurga: ಬಿಸಿಲು ಮತ್ತು ಅಸಹನೀಯ ತಾಪಮಾನದಿಂದ ಬಸವಳಿದಿದ್ದ ಚಿತ್ರದುರ್ಗದಲ್ಲಿ ಮಳೆ, ಕೊಂಚ ನಿರಾಳರಾದ ಜನ

ಅರುಣ್​ ಕುಮಾರ್​ ಬೆಳ್ಳಿ

Updated on: May 11, 2023 | 6:55 PM

ಮಂಗಳವಾರ ಹುಬ್ಬಳ್ಳಿಯಲ್ಲಿಯೂ ಭಾರೀ ಮಳೆ ಸುರಿದಿತ್ತು. ರಸ್ತೆಬದಿ ಪಾರ್ಕ್ ಮಾಡಿದ್ದ ವಾಹನಗಳ ಅರ್ಧದಷ್ಟು ಭಾಗ ನೀರಿನಲ್ಲಿ ಮುಳುಗಿದ್ದವು.

ಚಿತ್ರದುರ್ಗ: ರಣ ಬಿಸಿಲಿನಿಂದ ಬಳಲಿ ಬೆಂಡಾಗಿದ್ದ ಚಿತ್ರದುರ್ಗದ (Chitradurga) ಜನತೆ ಇಂದು ಮಧ್ಯಾಹ್ನ ಸುರಿದ ಭರ್ಜರಿ ಮಳೆಯಿಂದ ಕೊಂಚ ನಿರಾಳರಾಗಿದ್ದಾರೆ. ಬಿಸಿಲಿಂದ ಕಾದು ಕೆಂಡದಂತಾಗಿದ್ದ ರಸ್ತೆಗಳು ತಂಪಾಗಿವೆ. ಮೊದಲು ಧೋ ಅಂತ ಸುರಿದ ಮಳೆ ನಂತರ ಜಡಿ ಮಳೆಯಾಗಿ ಧರೆಗಿಳಿಯುತ್ತಿದೆ. ಚಿತ್ರದುರ್ಗ ಬಯಲು ಸೀಮೆ ಅಂತ ನಮ್ಮೆಲ್ಲರಿಗೆ ಗೊತ್ತಿರುವ ಸಂಗತಿ. ಆದರೆ ಈ ವಿಡಿಯೋ ನೋಡುತ್ತಿದ್ದರೆ ಅದು ಮಲೆನಾಡು (Malnad) ಪ್ರದೇಶದಂತೆ ಭಾಸವಾಗುತ್ತದೆ. ಮಂಗಳವಾರ ಹುಬ್ಬಳ್ಳಿಯಲ್ಲಿಯೂ (Hubballi) ಭಾರೀ ಮಳೆ ಸುರಿದಿತ್ತು. ರಸ್ತೆಬದಿ ಪಾರ್ಕ್ ಮಾಡಿದ್ದ ವಾಹನಗಳ ಅರ್ಧದಷ್ಟು ಭಾಗ ನೀರಿನಲ್ಲಿ ಮುಳುಗಿದ್ದವು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: May 11, 2023 06:18 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.