Video: ಕುಡಿದ ಮತ್ತಿನಲ್ಲಿ ಹಾವನ್ನು ಕೈಗೆ ಸುತ್ತಿಕೊಂಡು ಟ್ರಾಫಿಕ್​ ಪೊಲೀಸ್​​ಗೆ ಆವಾಜ್ ಹಾಕಿದ ಆಟೋ ಡ್ರೈವರ್

Updated on: Jan 05, 2026 | 9:50 AM

ಆಟೋ ಡ್ರೈವರ್ ಕುಡಿದ ಮತ್ತಿನಲ್ಲಿ ಹಾವನ್ನು ಕೈಯಲ್ಲಿ ಸುತ್ತಿಕೊಂಡು ಟ್ರಾಫಿಕ್ ಪೊಲೀಸರನ್ನು ಬೆದರಿಸುವ ವಿಡಿಯೋ ವೈರಲ್ ಆಗಿದೆ. ಹೈದರಾಬಾದ್​ನ ಹಳೆಯ ನಗರದ ಚಂದ್ರಾಯನಗುಟ್ಟ ಕ್ರಾಸ್​ರೋಡ್ಸ್​​ನಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಡ್ರಂಕ್ ಆಂಡ್ ಡ್ರೈವ್ ತಪಾಸಣೆ ಮಾಡುತ್ತಿದ್ದಾಗ, ಈ ಚಾಲಕನಿದ್ದ ಆಟೋವನ್ನು ಕೂಡ ನಿಲ್ಲಿಸಿದ್ದಾರೆ. ಆಗ ಕೋಪಗೊಂಡ ಚಾಲಕ ಕೈಯಲ್ಲಿ ಜೀವಂತ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸರನ್ನು ಬೆದರಿಸಿದ್ದಾರೆ.

ಹೈದರಾಬಾದ್, ಜನವರಿ 05: ಆಟೋ ಡ್ರೈವರ್ ಕುಡಿದ ಮತ್ತಿನಲ್ಲಿ ಹಾವನ್ನು ಕೈಗೆ ಸುತ್ತಿಕೊಂಡು ಟ್ರಾಫಿಕ್ ಪೊಲೀಸರನ್ನು ಬೆದರಿಸುವ ವಿಡಿಯೋ ವೈರಲ್ ಆಗಿದೆ. ಹೈದರಾಬಾದ್​ನ ಹಳೆಯ ನಗರದ ಚಂದ್ರಾಯನಗುಟ್ಟ ಕ್ರಾಸ್​ರೋಡ್ಸ್​​ನಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಡ್ರಂಕ್ ಆಂಡ್ ಡ್ರೈವ್ ತಪಾಸಣೆ ಮಾಡುತ್ತಿದ್ದಾಗ, ಈ ಚಾಲಕನಿದ್ದ ಆಟೋವನ್ನು ಕೂಡ ನಿಲ್ಲಿಸಿದ್ದಾರೆ. ಆಗ ಕೋಪಗೊಂಡ ಚಾಲಕ ಕೈಯಲ್ಲಿ ಜೀವಂತ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸರನ್ನು ಬೆದರಿಸಿದ್ದಾರೆ.
ಜನನಿಬಿಡ ಜಂಕ್ಷನ್‌ನಲ್ಲಿ ಭೀತಿ ಸೃಷ್ಟಿಸಿದ್ದ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಚಾಲಕ ಆರಂಭದಲ್ಲಿ ಸಂಚಾರ ಪೊಲೀಸರಿಗೆ ಕೈಮುಗಿದು ಕ್ಷಮೆಯಾಚಿಸಿ ತನ್ನ ವಾಹನವನ್ನು ಹಿಂತಿರುಗಿಸುವಂತೆ ವಿನಂತಿಸುತ್ತಿರುವುದನ್ನು ನೋಡಬಹುದು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Jan 05, 2026 09:50 AM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More