AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನ್ಯಾಸಿಯೇ ಆಗಲಿ, ಮುಖ್ಯಮಂತ್ರಿಯೇ ಆಗಲಿ ತಾಯಿಯ ಮುಂದೆ ಮುದ್ದು ಮಗನೇ: ಅಮ್ಮನ ಪಾರ್ಥಿವ ಶರೀರದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಸಿಎಂ ಯೋಗಿ

ಸನ್ಯಾಸಿಯೇ ಆಗಲಿ, ಮುಖ್ಯಮಂತ್ರಿಯೇ ಆಗಲಿ ತಾಯಿಯ ಮುಂದೆ ಮುದ್ದು ಮಗನೇ: ಅಮ್ಮನ ಪಾರ್ಥಿವ ಶರೀರದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಸಿಎಂ ಯೋಗಿ

ಅಕ್ಷಯ್​ ಪಲ್ಲಮಜಲು​​
|

Updated on: Nov 21, 2026 | 2:14 PM

Share

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ 90ನೇ ವಯಸ್ಸಿನಲ್ಲಿ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಾವಿತ್ರಿ ದೇವಿ ಅವರ ಪಾರ್ಥಿವ ಶರೀರಕ್ಕೆ ಉತ್ತರಾಖಂಡದ ತಮ್ಮ ಪೂರ್ವಜರ ಗ್ರಾಮದಲ್ಲಿ ಯೋಗಿ ಆದಿತ್ಯನಾಥ್ ಸ್ವತಃ ಹೆಗಲು ಕೊಟ್ಟರು. ಈ ಅಂತಿಮ ವಿದಾಯದಲ್ಲಿ ಹಲವು ನಾಯಕರು ಉಪಸ್ಥಿತರಿದ್ದರು.

ಉತ್ತರ ಪ್ರದೇಶ, ನ.21: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (90) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ತಮ್ಮ 90ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಈ ಕುರಿತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಮಾತೃವಿಯೋಗ ಉಂಟಾಗಿದೆ.ತಮ್ಮ ತಾಯಿಯ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಯೋಗಿ ಆದಿತ್ಯನಾಥ್ ಅವರು ಉತ್ತರಾಖಂಡದ ತಮ್ಮ ಪೂರ್ವಜರ ಗ್ರಾಮಕ್ಕೆ ತೆರಳಿದರು. ಅಲ್ಲಿ ಸಾವಿತ್ರಿ ದೇವಿ ಅವರ ಪಾರ್ಥಿವ ಶರೀರಕ್ಕೆ ಯೋಗಿ ಆದಿತ್ಯನಾಥ್ ಸ್ವತಃ ಹೆಗಲು ಕೊಟ್ಟು, ಪುತ್ರನ ಕರ್ತವ್ಯವನ್ನು ನಿಭಾಯಿಸಿದರು. ತಾಯಿಯ ಅಂತ್ಯಕ್ರಿಯೆ ವಿಧಿವಿಧಾನಗಳನ್ನು ಪೂರೈಸಿದರು. ಈ ದುಃಖದ ಸಂದರ್ಭದಲ್ಲಿ ಹಲವು ಪ್ರಮುಖ ನಾಯಕರು ಮತ್ತು ಗಣ್ಯರು ಸಾವಿತ್ರಿ ದೇವಿ ಅವರ ಅಂತಿಮ ದರ್ಶನ ಪಡೆದು, ಯೋಗಿ ಆದಿತ್ಯನಾಥ್ ಅವರಿಗೆ ಸಾಂತ್ವನ ಹೇಳಿದರು. ಈ ಅಂತಿಮ ವಿದಾಯದ ದೃಶ್ಯಗಳು ಭಾವುಕ ಕ್ಷಣಗಳಿಗೆ ಸಾಕ್ಷಿಯಾದವು. ಯೋಗಿ ಆದಿತ್ಯನಾಥ್ ಅವರ ಸರಳತೆ ಮತ್ತು ತಾಯಿಯ ಮೇಲಿನ ಪ್ರೀತಿ ಈ ಮೂಲಕ ಮತ್ತೊಮ್ಮೆ ಪ್ರಕಟವಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More