Video: ಆಸ್ಪತ್ರೆಯ ವಾರ್ಡ್​ ಒಳಗೆ ಫಿಯಾನ್ಸಿ ಜತೆ ವೈದ್ಯನ ಡ್ಯಾನ್ಸ್

Updated on: Nov 21, 2025 | 3:12 PM

ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಆಸ್ಪತ್ರೆಯ ವಾರ್​ಡ್​ ಒಳಗೆ ಫಿಯಾನ್ಸಿ ಜತೆ ಡ್ಯುಯೆಟ್ ಹಾಡಿ ಕೆಲಸ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಾ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯ ಕೋಣೆಯಲ್ಲಿ ಇಬ್ಬರೂ ನೃತ್ಯ ಮಾಡಿದ ವಿಡಿಯೋ ವೈರಲ್ ಆದ ಬಳಿಕ ವೈದ್ಯರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಆಸ್ಪತ್ರೆ ಆಡಳಿತವು ಸರ್ಕಾರ ಒದಗಿಸಿದ ಅವರ ವಸತಿ ಸೌಕರ್ಯವನ್ನು ಖಾಲಿ ಮಾಡಿ, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ವಿವರವಾದ ವರದಿಯನ್ನು ಸಲ್ಲಿಸಿತು

ಲಕ್ನೋ, ನವೆಂಬರ್ 21: ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಆಸ್ಪತ್ರೆಯ ವಾರ್​ಡ್​ ಒಳಗೆ ಫಿಯಾನ್ಸಿ ಜತೆ ಡ್ಯುಯೆಟ್ ಹಾಡಿ ಕೆಲಸ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಾ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯ ಕೋಣೆಯಲ್ಲಿ ಇಬ್ಬರೂ ನೃತ್ಯ ಮಾಡಿದ ವಿಡಿಯೋ ವೈರಲ್ ಆದ ಬಳಿಕ ವೈದ್ಯರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಆಸ್ಪತ್ರೆ ಆಡಳಿತವು ಸರ್ಕಾರ ಒದಗಿಸಿದ ಅವರ ವಸತಿ ಸೌಕರ್ಯವನ್ನು ಖಾಲಿ ಮಾಡಿ, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ವಿವರವಾದ ವರದಿಯನ್ನು ಸಲ್ಲಿಸಿತು. ಇತ್ತೀಚೆಗೆ ಎರಡು ವರ್ಷಗಳ ಒಪ್ಪಂದದ ಮೇಲೆ ನೇಮಕಗೊಂಡು ಆಸ್ಪತ್ರೆಯ ತುರ್ತು ವಾರ್ಡ್‌ನಲ್ಲಿ ನಿಯೋಜನೆಗೊಂಡಿದ್ದ ಡಾ. ವಕಾರ್ ಸಿದ್ದಿಕಿ, ಆಸ್ಪತ್ರೆಯ ಮೇಲಿನ ಮಹಡಿಯ ಮುಚ್ಚಿದ ಕೋಣೆಯಲ್ಲಿ ಯುವತಿಯೊಂದಿಗೆ ನೃತ್ಯ ಮಾಡುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More