Video: ಕುತ್ತಿಗೆಗೆ ಗುಂಡೇಟು, ಎಲ್ಲೆಲ್ಲೂ ರಕ್ತ, ಬೈಕ್​​ನಲ್ಲಿ ಪೆಟ್ರೋಲ್​​ ಬಂಕ್​ಗೆ ಬಂದು ಸಹಾಯ ಕೇಳಿದ ಯುವಕ

Updated on: Jul 29, 2025 | 10:22 PM

: ಗುಂಡೇಟು ತಿಂದ ವ್ಯಕ್ತಿಯೊಬ್ಬ ಪೆಟ್ರೋಲ್​ ಬಂಕ್​​ಗೆ ಬಂದು ಸಹಾಯಕ್ಕಾಗಿ ಅಂಗಲಾಚುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆತನ ಕುತ್ತಿಗೆಗೆ ಗುಂಡು ಹಾರಿಸಲಾಗಿತ್ತು. ಎಲ್ಲೆಲ್ಲೂ ರಕ್ತ, ಆ ನೋವಿನಲ್ಲೇ ಬೈಕ್ ಚಲಾಯಿಸಿಕೊಂಡು ಪೆಟ್ರೋಲ್​ಬಂಕ್​ಗೆ ಬಂದಿದ್ದು, ಅಲ್ಲಿ ಸಹಾಯಕ್ಕಾಗಿ ಎಲ್ಲರನ್ನೂ ಕೇಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. 23 ವರ್ಷದ ತಾಜುದ್ದೀನ್ ಅಲಿಯಾಸ್ ಶಾನು ಅವರ ಕುತ್ತಿಗೆಗೆ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ಗುಂಡು ಹಾರಿಸಿತ್ತು.

ಲಕ್ನೋ, ಜುಲೈ 29: ಗುಂಡೇಟು ತಿಂದ ವ್ಯಕ್ತಿಯೊಬ್ಬ ಪೆಟ್ರೋಲ್​ ಬಂಕ್​​ಗೆ ಬಂದು ಸಹಾಯಕ್ಕಾಗಿ ಅಂಗಲಾಚುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆತನ ಕುತ್ತಿಗೆಗೆ ಗುಂಡು ಹಾರಿಸಲಾಗಿತ್ತು. ಎಲ್ಲೆಲ್ಲೂ ರಕ್ತ, ಆ ನೋವಿನಲ್ಲೇ ಬೈಕ್ ಚಲಾಯಿಸಿಕೊಂಡು ಪೆಟ್ರೋಲ್​ಬಂಕ್​ಗೆ ಬಂದಿದ್ದು, ಅಲ್ಲಿ ಸಹಾಯಕ್ಕಾಗಿ ಎಲ್ಲರನ್ನೂ ಕೇಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. 23 ವರ್ಷದ ತಾಜುದ್ದೀನ್ ಅಲಿಯಾಸ್ ಶಾನು ಅವರ ಕುತ್ತಿಗೆಗೆ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ಗುಂಡು ಹಾರಿಸಿತ್ತು. ಶಾನು ಜೈಸ್ವಾಲ್ ಅವರ ಕಚೇರಿಯಿಂದ ಮನೆಗೆ ಹಿಂತಿರುಗುತ್ತಿದ್ದಾಗ ಕತ್ರಾ-ಬಿಲ್ಹೌರ್ ಹೆದ್ದಾರಿಯಲ್ಲಿರುವ ಅಸ್ಮಾನಿ ಪ್ಯಾಲೇಸ್ ಬಳಿ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ. ಶಾನು ಅವರನ್ನು ಪ್ರಥಮ ಚಿಕಿತ್ಸೆಗಾಗಿ ಮಲ್ಲವನ್ ಸಿಎಚ್‌ಸಿಗೆ ಕರೆದೊಯ್ದು, ಗಂಭೀರ ಗಾಯಗಳಾಗಿದ್ದರಿಂದ ಲಕ್ನೋದ ಟ್ರಾಮಾ ಸೆಂಟರ್‌ಗೆ ಕರೆದೊಯ್ಯಲಾಯಿತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More