‘ಉಪಾಧ್ಯಕ್ಷ’ ಯಶಸ್ಸು: ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ ಸಿನಿಮಾ ತಂಡ

Updated on: Feb 03, 2024 | 9:46 AM

ನಿರ್ಮಾಪಕ ಉಮಾಪತಿ ಶ್ರೀನಿವಾಸ್, ನಟ ಚಿಕ್ಕಣ್ಣ ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ ಸಿನಿಮಾ ಪ್ರಾರಂಭವಾದಾಗ ಉಮಾಪತಿ ಹರಕೆ ಹೊತ್ತಿದ್ದರು. ಈಗ ಹರಕೆಯನ್ನು ಅವರು ತೀರಿಸಿದ್ದಾರೆ.

‘ಉಪಾಧ್ಯಕ್ಷ’ ಸಿನಿಮಾ‌ದಲ್ಲಿ (Upadhyaksha Movie) ಚಿಕ್ಕಣ್ಣ ಉಪಾಧ್ಯಕ್ಷನಾಗಿ ಕಾಣಿಸಿಕೊಂಡಿದ್ದಾರೆ. ‘ಅಧ್ಯಕ್ಷ’ ಚಿತ್ರದ ಸ್ಪಿನ್​ಆಫ್ ರೀತಿಯಲ್ಲಿ ಈ ಸಿನಿಮಾ ಮೂಡಿ ಬಂದಿದೆ. ಬಹುತೇಕ ‘ಅಧ್ಯಕ್ಷ’ ಸಿನಿಮಾದ ಪಾತ್ರವರ್ಗವನ್ನೇ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಹೀಗಾಗಿ, ನಟ ಚಿಕ್ಕಣ್ಣ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರು ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ ಸಿನಿಮಾ ಪ್ರಾರಂಭವಾದಾಗ ಉಮಾಪತಿ ಹರಕೆ ಹೊತ್ತಿದ್ದರು. ಈಗ ಹರಕೆಯನ್ನು ಅವರು ತೀರಿಸಿದ್ದಾರೆ. ಜನವರಿ 26ರಂದು ‘ಉಪಾಧ್ಯಕ್ಷ’ ಸಿನಿಮಾ ರಿಲೀಸ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Feb 03, 2024 08:13 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More