Kabzaa Movie Audio launch: ಶಿಡ್ಲಘಟ್ಟದಲ್ಲಿ ‘ಕಬ್ಜ’ ಚಿತ್ರದ ಅದ್ದೂರಿ ಆಡಿಯೋ ಲಾಂಚ್​; ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ..

Updated on: Feb 26, 2023 | 7:45 PM

Kabzaa Audio Release Live: ಉಪೇಂದ್ರ, ಕಿಚ್ಚ ಸುದೀಪ್, ಶ್ರೀಯಾ ಶರಣ್​ ಅವರು ‘ಕಬ್ಜ’ ಚಿತ್ರದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ರವಿ ಬಸ್ರೂರು ಸಂಗೀತ ನಿರ್ದೇಶನ ಮಾಡಿದ್ದಾರೆ.

ಬಹುನಿರೀಕ್ಷಿತ ‘ಕಬ್ಜ’ ಸಿನಿಮಾದ (Kabzaa Movie) ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಮಾರ್ಚ್​ 17ರಂದು ಈ ಚಿತ್ರ ರಿಲೀಸ್​ ಆಗಲಿದೆ. ಆರ್​. ಚಂದ್ರು ಅವರ ನಿರ್ದೇಶನದಲ್ಲಿ ‘ಕಬ್ಜ’ ಚಿತ್ರ ಮೂಡಿಬರುತ್ತಿದ್ದು, ಈಗ ಆಡಿಯೋ ಲಾಂಚ್​ ಮಾಡಲಾಗುತ್ತಿದೆ. ಶಿಡ್ಲಘಟ್ಟದಲ್ಲಿ (Sidlaghatta) ಬೃಹತ್​ ವೇದಿಕೆ ನಿರ್ಮಿಸಿ, ಲಕ್ಷಾಂತರ ಜನರ ಸಮ್ಮುಖದಲ್ಲಿ ಹಾಡುಗಳ ಬಿಡುಗಡೆ ಆಗುತ್ತಿದೆ. ಈ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದಾರೆ. ರಿಯಲ್​ ಸ್ಟಾರ್​ ಉಪೇಂದ್ರ (Upendra), ಕಿಚ್ಚ ಸುದೀಪ್, ಶ್ರೀಯಾ ಶರಣ್​ ಅವರು ‘ಕಬ್ಜ’ ಚಿತ್ರದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ರವಿ ಬಸ್ರೂರು ಸಂಗೀತ ನಿರ್ದೇಶನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More