ಯುಐ, ಮ್ಯಾಕ್ಸ್ ಒಟ್ಟಿಗೆ ರಿಲೀಸ್ ಆಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಉಪೇಂದ್ರ

Updated on: Dec 02, 2024 | 11:11 PM

‘ಯುಐ’ ಸಿನಿಮಾ ಡಿಸೆಂಬರ್​ 20ರಂದು ತೆರೆಕಾಣಲಿದೆ. ‘ಮ್ಯಾಕ್ಸ್’ ಚಿತ್ರ ಡಿಸೆಂಬರ್​ 25ಕ್ಕೆ ಬಿಡುಗಡೆ ಆಗಲಿದೆ. ಈ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ‘ರಜೆಗಳು ಇದ್ದಾಗ ಸಿನಿಮಾ ರಿಲೀಸ್ ಮಾಡಲು ಎಲ್ಲರೂ ಬಯಸುತ್ತಾರೆ. ರಜಾ ದಿನಗಳು ಇದ್ದಾಗ ಜನರು ಚಿತ್ರಮಂದಿರಕ್ಕೆ ಬರುತ್ತಾರೆ. ಎಲ್ಲ ಭಾಷೆಯಲ್ಲೂ ಎರಡು-ಮೂರು ಸಿನಿಮಾಗಳು ಬರುತ್ತವೆ’ ಎಂದು ಉಪೇಂದ್ರ ಹೇಳಿದ್ದಾರೆ.

‘ಯುಐ’ ಸಿನಿಮಾ ಡಿಸೆಂಬರ್​ 20ರಂದು ತೆರೆಕಾಣಲಿದೆ. ‘ಮ್ಯಾಕ್ಸ್’ ಚಿತ್ರ ಡಿಸೆಂಬರ್​ 25ಕ್ಕೆ ಬಿಡುಗಡೆ ಆಗಲಿದೆ. ಈ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ‘ಹಬ್ಬದ ರಜೆಗಳು ಇದ್ದಾಗ ಸಿನಿಮಾ ರಿಲೀಸ್ ಮಾಡಲು ಎಲ್ಲರೂ ಬಯಸುತ್ತಾರೆ. ರಜಾ ದಿನಗಳು ಇದ್ದಾಗ ಜನರು ಚಿತ್ರಮಂದಿರಕ್ಕೆ ಬರುತ್ತಾರೆ. ಎಲ್ಲ ಭಾಷೆಯಲ್ಲೂ ಎರಡು-ಮೂರು ಸಿನಿಮಾಗಳು ಬರುತ್ತವೆ. ಅದನ್ನು ಹೊರತುಪಡಿಸಿ ಬೇರೆ ಏನೂ ಇಲ್ಲ’ ಎಂದು ಉಪೇಂದ್ರ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ವಿಡಿಯೋ ಇಲ್ಲಿದೆ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More