‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ನಟ ಉಪೇಂದ್ರ ಅವರಿಗೆ ‘ಯುಐ’ ಸಿನಿಮಾ ಮೂಲಕ ಗೆಲುವು ಸಿಕ್ಕಿದೆ. ಅವರು ನಿರ್ದೇಶನ ಮಾಡಿದ ಸಿನಿಮಾ ಎಂಬ ಕಾರಣಕ್ಕೆ ‘ಯುಐ’ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇತ್ತು. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದರಿಂದ ಚಿತ್ರತಂಡಕ್ಕೆ ಖುಷಿ ಆಗಿದೆ. ಈ ಸಿನಿಮಾದ ಯಶಸ್ಸಿನ ಬಳಿಕ ನಟ, ನಿರ್ದೇಶಕ ಉಪೇಂದ್ರ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ.
ಉಪೇಂದ್ರ ನಿರ್ದೇಶನ ಮಾಡಿದ ‘ಯುಐ’ ಸಿನಿಮಾವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಸಿನಿಮಾ ಉತ್ತಮ ಪ್ರದರ್ಶನ ಕಂಡಿರುವುದರಿಂದ ಉಪೇಂದ್ರ ಅವರ ಫ್ಯಾನ್ ಫಾಲೋಯಿಂಗ್ ಹೆಚ್ಚಿದೆ. ಇಂದು (ಡಿಸೆಂಬರ್ 29) ಉಪೇಂದ್ರ ಅವರು ಉಡುಪಿ ಕೃಷ್ಣನ ದರ್ಶನ ಪಡೆದಿದ್ದಾರೆ. ಅವರ ಜೊತೆ ಲಹರಿ ವೇಲು ಕೂಡ ಸಾಥ್ ನೀಡಿದರು. ದೇವಸ್ಥಾನದಲ್ಲಿ ಉಪೇಂದ್ರ ಅವರನ್ನು ಕಂಡು ಅಭಿಮಾನಿಗಳಿಗೆ ಖುಷಿ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos