‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ

|

Updated on: Dec 29, 2024 | 8:05 PM

ನಟ ಉಪೇಂದ್ರ ಅವರಿಗೆ ‘ಯುಐ’ ಸಿನಿಮಾ ಮೂಲಕ ಗೆಲುವು ಸಿಕ್ಕಿದೆ. ಅವರು ನಿರ್ದೇಶನ ಮಾಡಿದ ಸಿನಿಮಾ ಎಂಬ ಕಾರಣಕ್ಕೆ ‘ಯುಐ’ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇತ್ತು. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದರಿಂದ ಚಿತ್ರತಂಡಕ್ಕೆ ಖುಷಿ ಆಗಿದೆ. ಈ ಸಿನಿಮಾದ ಯಶಸ್ಸಿನ ಬಳಿಕ ನಟ, ನಿರ್ದೇಶಕ ಉಪೇಂದ್ರ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ.

ಉಪೇಂದ್ರ ನಿರ್ದೇಶನ ಮಾಡಿದ ‘ಯುಐ’ ಸಿನಿಮಾವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಸಿನಿಮಾ ಉತ್ತಮ ಪ್ರದರ್ಶನ ಕಂಡಿರುವುದರಿಂದ ಉಪೇಂದ್ರ ಅವರ ಫ್ಯಾನ್ ಫಾಲೋಯಿಂಗ್ ಹೆಚ್ಚಿದೆ. ಇಂದು (ಡಿಸೆಂಬರ್​ 29) ಉಪೇಂದ್ರ ಅವರು ಉಡುಪಿ ಕೃಷ್ಣನ ದರ್ಶನ ಪಡೆದಿದ್ದಾರೆ. ಅವರ ಜೊತೆ ಲಹರಿ ವೇಲು ಕೂಡ ಸಾಥ್ ನೀಡಿದರು. ದೇವಸ್ಥಾನದಲ್ಲಿ ಉಪೇಂದ್ರ ಅವರನ್ನು ಕಂಡು ಅಭಿಮಾನಿಗಳಿಗೆ ಖುಷಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.