ಬಸವ ಜಯಂತಿ ಮೆರವಣಿಗೆಯಲ್ಲಿ ಕಿರಿಕ್; ಪೊಲೀಸರಿಂದ ಲಘು ಲಾಠಿ ಪ್ರಹಾರ

Edited By: ಕಿರಣ್ ಹನುಮಂತ್​ ಮಾದಾರ್

Updated on: Jun 06, 2024 | 4:21 PM

ಚಾಮರಾಜನಗರ(Chamarajanagar)ದ ಸುಲ್ತಾನ್ ಷರೀಪ್ ಸರ್ಕಲ್‌ನಲ್ಲಿ ಇಂದು(ಜೂ.06) ನಡೆದಿದ್ದ ಬಸವ ಜಯಂತಿ(Basava jayanti) ಮೆರವಣಿಗೆ ವೇಳೆ ಪೊಲೀಸರು ಹಾಗೂ ಮೆರವಣಿಗೆಕಾರರ ನಡುವೆ ಗಲಾಟೆ ಆಗಿದೆ. ಮೆರವಣಿಗೆ ವೇಳೆ ಡಿಜೆ ಹಾಕಿದ್ದಕ್ಕೆ ಪೊಲೀಸರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಹಿನ್ನಲೆ ರೊಚ್ಚಿಗೆದ್ದ ವೀರಶೈವ ಲಿಂಗಾಯತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಚಾಮರಾಜನಗರ, ಜೂ.06:  ಚಾಮರಾಜನಗರ(Chamarajanagar)ದ ಸುಲ್ತಾನ್ ಷರೀಪ್ ಸರ್ಕಲ್‌ನಲ್ಲಿ ಇಂದು(ಜೂ.06) ನಡೆದಿದ್ದ ಬಸವ ಜಯಂತಿ(Basava jayanti) ಮೆರವಣಿಗೆ ವೇಳೆ ಪೊಲೀಸರು ಹಾಗೂ ಮೆರವಣಿಗೆಕಾರರ ನಡುವೆ ಗಲಾಟೆ ಆಗಿದೆ. ಮೆರವಣಿಗೆ ವೇಳೆ ಡಿಜೆ ಹಾಕಿದ್ದಕ್ಕೆ ಪೊಲೀಸರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಹಿನ್ನಲೆ ರೊಚ್ಚಿಗೆದ್ದ ವೀರಶೈವ ಲಿಂಗಾಯತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಮೆರವಣಿಗೆಯಲ್ಲಿ ಭಾಗವಹಿಸಿದ್ದವರ ನಡುವೆ ತಳ್ಳಟಾ ನೂಕಾಟ ಶುರುವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಪರಿಣಾಮ ಸುಲ್ತಾನ್ ಷರೀಫ್ ವೃತ್ತದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ವೃತ್ತದಲ್ಲೇ ನಿಂತ ಮೆರವಣಿಗೆ ವಾಹನದಿಂದ ಸಂಚಾರ ಅಸ್ತವ್ಯಸ್ತವಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More