AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ

ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ

ಹರೀಶ್ ಜಿ.ಆರ್​.
| Edited By: |

Updated on:May 27, 2026 | 8:13 PM

Share

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಯು ಬೆಂಬಲಿಗರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ನಿವಾಸದ ಮುಂದೆ ಜಮಾಯಿಸಿದ ಅಭಿಮಾನಿಗಳು ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯ ಶಕ್ತಿ ಎಂದು ಬಣ್ಣಿಸಿರುವ ಅಹಿಂದ ನಾಯಕರು, ಅವರ ರಾಜೀನಾಮೆಯಿಂದ ಜೆಡಿಎಸ್‌ಗೆ ಆದ ಗತಿಯೇ ಕಾಂಗ್ರೆಸ್‌ಗೂ ಆಗಲಿದೆ ಎಂದು ಎಚ್ಚರಿಸಿದ್ದಾರೆ.

ಬೆಂಗಳೂರು, ಮೇ 27: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ದಟ್ಟವಾಗುತ್ತಿದ್ದಂತೆ, ಅವರ ಬೆಂಬಲಿಗರು ಮತ್ತು ಅಹಿಂದ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ನಿರ್ಧಾರದ ವಿರುದ್ಧ ನಿಗಿ ನಿಗಿ ಎನ್ನುತ್ತಿರುವ ಅಭಿಮಾನಿಗಳು ಸಿದ್ದರಾಮಯ್ಯನವರ ನಿವಾಸದ ಮುಂದೆ ಜಮಾಯಿಸಿ ಪ್ರತಿಭಟಿಸಿದರು. ‘ಯಾವನು ಹೈಕಮಾಂಡ್’ ಎಂದು ಸಿದ್ದರಾಮಯ್ಯ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದರೆ ಕಾಂಗ್ರೆಸ್ ಪಕ್ಷ ಸರ್ವನಾಶವಾಗುತ್ತದೆ ಎಂದು ಬೆಂಬಲಿಗರು ಆತಂಕ ವ್ಯಕ್ತಪಡಿಸಿದ್ದಾರೆ. ಹಿಂದೆ ಸಿದ್ದರಾಮಯ್ಯ ಜೆಡಿಎಸ್ ತೊರೆದ ನಂತರ ಆ ಪಕ್ಷಕ್ಕೆ ಹಿನ್ನಡೆಯಾಗಿತ್ತು ಎಂದು ಉದಾಹರಿಸಿದ ಅಭಿಮಾನಿಗಳು, ಇದೇ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೂ ಎದುರಾಗಲಿದೆ ಎಂದು ಎಚ್ಚರಿಸಿದ್ದಾರೆ. ಸಿದ್ದರಾಮಯ್ಯ ಒಬ್ಬ ಜನಪ್ರಿಯ ನಾಯಕರು ಮತ್ತು ಅಹಿಂದ ವರ್ಗದ ಬಲ ಎಂದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವುದೇ ಸಿದ್ದರಾಮಯ್ಯರಿಂದ, ಒಂದು ವೇಳೆ ಸಿಎಂ ಸ್ಥಾನದಿಂದ ಅವರನ್ನ ಕೆಳಗಿಳಿಸಿದರೆ, 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುತ್ತೆ ಎಂದಿದ್ದಾರೆ. ಇನ್ನು ಆಕ್ರೋಶ ವ್ಯಕ್ತಪಡಿಸುತ್ತಿದ್ದ ಅಭಿಮಾನಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: May 27, 2026 08:11 PM

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More