ಎನ್‌ಡಿಎಯಲ್ಲಿ ಭಾರತಕ್ಕೇ ಪ್ರಥಮ ರ್ಯಾಂಕ್ ಗಳಿಸಿದ ಶ್ರೇಯಾ ಮನೆಗೆ ಸಂಸದ ಬಿವೈ ರಾಘವೇಂದ್ರ ಅಭಿನಂದನೆ

Edited By:

Updated on: Nov 10, 2026 | 7:42 PM

ಯುಪಿಎಸ್‌ಸಿ ಎನ್​ಡಿಎ ಪರೀಕ್ಷೆಯಲ್ಲಿ ಮಹಿಳಾ ವಿಭಾಗದಲ್ಲಿ ದೇಶಕ್ಕೆ ಪ್ರಥಮ ರ್ಯಾಂಕ್ ಪಡೆದ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಶ್ರೇಯಾ ಎನ್. ಗೌಡ ಅವರನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ಮನೆಗೆ ತೆರಳಿ ಸನ್ಮಾನಿಸಿದರು. ಶ್ರೇಯಾ ಅವರ ಸಾಧನೆ ಯುವ ಸಮುದಾಯಕ್ಕೆ ಸ್ಪೂರ್ತಿಯಾಗಿದೆ ಎಂದು ರಾಘವೇಂದ್ರ ಶ್ಲಾಘಿಸಿದರು.

ಶಿವಮೊಗ್ಗ, ನ.10: ಜಿಲ್ಲೆಯ ಭದ್ರಾವತಿ ಮೂಲದ ಶ್ರೇಯಾ ಎನ್. ಗೌಡ ಅವರು ಯುಪಿಎಸ್‌ಸಿ ನಡೆಸಿದ ಎನ್​ಡಿಎ (ನ್ಯಾಷನಲ್ ಡಿಫೆನ್ಸ್ ಅಕಾಡೆಮಿ) ಪರೀಕ್ಷೆಯಲ್ಲಿ ಮಹಿಳಾ ವಿಭಾಗದಲ್ಲಿ ದೇಶಕ್ಕೆ ಪ್ರಥಮ ರ್ಯಾಂಕ್ ಗಳಿಸಿ ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಅವರ ಈ ಅಸಾಧಾರಣ ಸಾಧನೆಗೆ ಸಂಸದ ಬಿ.ವೈ. ರಾಘವೇಂದ್ರ ಅವರು ಶ್ರೇಯಾ ಗೌಡ ಅವರ ಮನೆಗೆ ಭೇಟಿ ನೀಡಿ ಸನ್ಮಾನಿಸಿ ಅಭಿನಂದಿಸಿದರು. ಸಾಮಾನ್ಯ ಕುಟುಂಬದಿಂದ ಬಂದ ಶ್ರೇಯಾ ಅವರ ತಂದೆ ಜೆ. ನಾಗೇಂದ್ರ ಅವರು ವಿಐಎಸ್‌ಎಲ್ ನಿವೃತ್ತ ನೌಕರರಾಗಿದ್ದು, ತಾಯಿ ಬಿ.ಎಂ. ಆಶಾ ಉಪನ್ಯಾಸಕಿಯಾಗಿದ್ದಾರೆ. ಈ ಹಿನ್ನೆಲೆಯಲ್ಲೂ ಶ್ರೇಯಾ ಅವರು ತೋರಿದ ಪ್ರತಿಭೆ ಮತ್ತು ಶ್ರಮವನ್ನು ಸಂಸದ ರಾಘವೇಂದ್ರ ಅವರು ಕೊಂಡಾಡಿದರು. ಶ್ರೇಯಾ ಅವರ ಸಾಧನೆಯು ದೇಶಭಕ್ತಿಯ ಪ್ರತೀಕವಾಗಿದ್ದು, ಯುವ ಪೀಳಿಗೆಗೆ ಸ್ಫೂರ್ತಿ ನೀಡಲಿದೆ ಎಂದು ಅವರು ಹೇಳಿದರು. ದೇಶಕ್ಕೆ ಒಬ್ಬ ಉತ್ತಮ ಯುವ ಸೇನಾನಿ ಸಿದ್ಧವಾಗಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪಕ್ಕೆ ಶ್ರೇಯಾ ಅವರ ಸಾಧನೆ ಬಲ ತುಂಬಿದೆ ಎಂದು ರಾಘವೇಂದ್ರ ಹೇಳಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಬಸವರಾಜ್​ ಯರಗಣವಿ

ಬಸವರಾಜ್ ಯರಗಣವಿಯವರು ಮೂಲತಃ ಧಾರವಾಡ ಜಿಲ್ಲೆಯವರು. ಇವರು ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ 2008ರ ಏಪ್ರಿಲ್ ನಿಂದ ವೃತ್ತಿ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 3 ವರ್ಷ, ನಂತರ ಹಾವೇರಿ ಜಿಲ್ಲೆಯಲ್ಲಿ 3 ವರ್ಷ ವರದಿಗಾರಿಕೆಯ ಕೆಲಸ ನಿರ್ವಹಿಸಿದ್ದಾರೆ. ಸಧ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಟಿವಿ9 ಕನ್ನಡ ಸುದ್ದಿ ವಾಹಿನಿಯ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯ ರಾಜಕೀಯ, ಅಪರಾಧ, ಮಹತ್ವದ ಬೆಳವಣಿಗೆ ಹಾಗೂ ಮಾನವೀಯ ಸುದ್ದಿಗಳನ್ನು ವರದಿ ಮಾಡಿರುವ ಅನುಭವವಿದೆ.

Read More