ಟ್ರಂಪ್ ನಿಮ್ಮನ್ನು ಉತ್ತಮ ಸ್ನೇಹಿತನೆಂದು ಪರಿಗಣಿಸಿದ್ದಾರೆ; ಪ್ರಧಾನಿ ಮೋದಿಯನ್ನು ಭೇಟಿಯಾದ ಅಮೆರಿಕ ರಾಯಭಾರಿ
ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ 'ಅಮೆರಿಕದ ಅಧ್ಯಕ್ಷ ಟ್ರಂಪ್ ನಿಮ್ಮನ್ನು ಉತ್ತಮ ಸ್ನೇಹಿತ ಎಂದು ಪರಿಗಣಿಸುತ್ತಾರೆ' ಎಂದು ಹೇಳಿದ್ದಾರೆ. "ಭಾರತಕ್ಕೆ ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಅವರನ್ನು ಸ್ವಾಗತಿಸಲು ಸಂತೋಷವಾಗಿದೆ. ಅವರ ಅಧಿಕಾರಾವಧಿಯು ಭಾರತ-ಯುಎಸ್ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ನನಗೆ ವಿಶ್ವಾಸವಿದೆ" ಎಂದು ಮೋದಿ ಹೇಳಿದ್ದಾರೆ.
ನವದೆಹಲಿ, ಅಕ್ಟೋಬರ್ 11: ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಇಂದು ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ಮೋದಿ (PM Modi) ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಅವರು ಅಮೆರಿಕ ಅಧ್ಯಕ್ಷ ಟ್ರಂಪ್ ಮೋದಿ ಅವರನ್ನು ಉತ್ತಮ ಸ್ನೇಹಿತ ಎಂದು ಪರಿಗಣಿಸುತ್ತಾರೆ ಎಂದು ಹೇಳಿದ್ದಾರೆ. “ಭಾರತದೊಂದಿಗಿನ ತನ್ನ ಸಂಬಂಧವನ್ನು ಅಮೆರಿಕ ಬಹಳವಾಗಿ ಗೌರವಿಸುತ್ತದೆ. ನಮ್ಮ ದೇಶದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ಮೋದಿ ಅವರನ್ನು ಉತ್ತಮ ಮತ್ತು ವೈಯಕ್ತಿಕ ಸ್ನೇಹಿತ ಎಂದು ಪರಿಗಣಿಸುತ್ತಾರೆ” ಎಂದು ಅವರು ಹೇಳಿದ್ದಾರೆ. ಶುಕ್ರವಾರ ನವದೆಹಲಿಗೆ ಆಗಮಿಸಿದ ಗೋರ್, ವಿದೇಶಾಂಗ ಸಚಿವ ಎಸ್ ಜೈಶಂಕರ್, ಎನ್‌ಎಸ್‌ಎ ಅಜಿತ್ ದೋವಲ್ ಮತ್ತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸೇರಿದಂತೆ ಹಲವು ನಾಯಕರ ಜೊತೆ ಸರಣಿ ಸಭೆಗಳನ್ನು ನಡೆಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ