Video: ಪೊಲೀಸರನ್ನು ಕೊಂದು ಪರಾರಿಯಾಯಾಗುತ್ತಿದ್ದ ವ್ಯಕ್ತಿಯ ಬೈಕ್ ಕಾರಿಗೆ ಡಿಕ್ಕಿ, ಭಯಾನಕ ವಿಡಿಯೋ
ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸುತ್ತಿದ್ದ ವ್ಯಕ್ತಿಯ ಬೈಕ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆತ ಬೈಕ್ನಿಂದ ಮೇಲಕ್ಕೆ ಹಾರಿ ಕೆಳಗೆ ಬಿದ್ದಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಅಮೆರಿಕದ ಸ್ಯಾನ್ ಬರ್ನಾರ್ಡಿನೋ ಕೌಂಟಿಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಬಂದೂಕು ಹಿಡಿದು ಮಹಿಳೆಯೊಬ್ಬರಿಗೆ ಬೆದರಿಕೆ ಹಾಕುತ್ತಿದ್ದಾನೆ ಎನ್ನುವ ಮಾಹಿತಿ ಮೇರೆಗೆ ಪೊಲೀಸರು ಅಲ್ಲಿಗೆ ತೆರಳಿದ್ದರು.
ವಾಷಿಂಗ್ಟನ್, ಅಕ್ಟೋಬರ್ 28: ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸುತ್ತಿದ್ದ ವ್ಯಕ್ತಿಯ ಬೈಕ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆತ ಬೈಕ್ನಿಂದ ಮೇಲಕ್ಕೆ ಹಾರಿ ಕೆಳಗೆ ಬಿದ್ದಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಅಮೆರಿಕದ ಸ್ಯಾನ್ ಬರ್ನಾರ್ಡಿನೋ ಕೌಂಟಿಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಬಂದೂಕು ಹಿಡಿದು ಮಹಿಳೆಯೊಬ್ಬರಿಗೆ ಬೆದರಿಕೆ ಹಾಕುತ್ತಿದ್ದಾನೆ ಎನ್ನುವ ಮಾಹಿತಿ ಮೇರೆಗೆ ಪೊಲೀಸರು ಅಲ್ಲಿಗೆ ತೆರಳಿದ್ದರು.
ಇದಕ್ಕಿದ್ದಂತೆ ಆತ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾನೆ. ಅದಾದ ಬಳಿಕ ಬೈಕ್ ತೆಗೆದುಕೊಂಡು ವೇಗವಾಗಿ ಓಡಿಸಿದ್ದಾನೆ. ಮಾರ್ಗಮಧ್ಯೆ ಆತನ ಬೈಕ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆತ ಕೆಳಗೆ ಬಿದ್ದಿದ್ದಾನೆ. ಅಪಘಾತ ತೀರಾ ಭಯಂಕರವಾಗಿತ್ತು. ಆತನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅವರ ಸ್ಥಿತಿ ಸ್ಥಿರವಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ