ಮೊದಲ ಬಾರಿಗೆ ಇರಾನ್ ಮೇಲೆ ದಾಳಿ ನಡೆಸಿದ ಯುಎಇ

Updated on: Jul 17, 2026 | 9:28 AM

ಅಮೆರಿಕ ಇರಾನ್ ರಾಜಧಾನಿ ಟೆಹ್ರಾನ್ ಮತ್ತು ಇತರ ನಗರಗಳಲ್ಲಿ ಮೂಲಸೌಕರ್ಯಗಳನ್ನು ಗುರಿಯಾಗಿಸಿ ಭೀಕರ ದಾಳಿಗಳನ್ನು ಮುಂದುವರೆಸಿದೆ. ಮಧ್ಯಪ್ರಾಚ್ಯ ಯುದ್ಧಕ್ಕೆ ಯುಎಇ ಸೇರಿಕೊಂಡು ಇರಾನ್ ಮೇಲೆ ಡ್ರೋನ್ ದಾಳಿ ನಡೆಸಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಕೆಂಪು ಸಮುದ್ರವನ್ನು ಬಂದ್ ಮಾಡುವ ಎಚ್ಚರಿಕೆ ನೀಡಿದೆ. ಅಮೆರಿಕದ ಕ್ರಮಗಳು ಯುದ್ಧಾಪರಾಧಗಳೆಂದು ಇರಾನ್ ಖಂಡಿಸಿದೆ.

ಟೆಹ್ರಾನ್, ಜುಲೈ 17: ಅಮೆರಿಕ ಇರಾನ್ ಮೇಲೆ ತನ್ನ ಭೀಕರ ದಾಳಿಗಳನ್ನು ಮುಂದುವರೆಸಿದೆ. ಆದರೆ ಮೊದಲ ಬಾರಿಗೆ ಇರಾನ್ ಮೇಲೆ ಯುಎಇ ದಾಳಿ ನಡೆಸಿ ಅಚ್ಚರಿ ಮೂಡಿಸಿದೆ. ಇರಾನ್ ರಾಜಧಾನಿ ಟೆಹ್ರಾನ್ ಮತ್ತು ಇತರ ಪ್ರಮುಖ ಸ್ಥಳಗಳಲ್ಲಿ ಭಯಾನಕ ದಾಳಿಗಳನ್ನು ನಡೆಸಿದೆ. ಚಬಹಾರ್ ಬಂದರು, ಬುಶೆಹರ್ ಪರಮಾಣು ಸಂಕೀರ್ಣ, ಇರಾನಿಶಾಹರ್ ವಿಮಾನ ನಿಲ್ದಾಣದಲ್ಲಿ ಪ್ರಬಲ ಸ್ಫೋಟಗಳು ಸಂಭವಿಸಿವೆ. ರೈಲ್ವೆ ಸೇತುವೆಗಳು ಮತ್ತು ರಸ್ತೆಗಳು ಸೇರಿದಂತೆ ಇರಾನ್‌ನ ಮೂಲಸೌಕರ್ಯಗಳನ್ನು ಅಮೆರಿಕ ಪ್ರಮುಖ ಗುರಿಯಾಗಿಸಿಕೊಂಡಿದೆ. ಈ ದಾಳಿಗಳಿಂದ ರೈಲ್ವೆ ಮತ್ತು ರಸ್ತೆಗಳು ಸಂಪೂರ್ಣವಾಗಿ ಧ್ವಂಸಗೊಂಡಿವೆ.

ಇದೇ ವೇಳೆ, ಮಧ್ಯಪ್ರಾಚ್ಯ ಯುದ್ಧದಲ್ಲಿ ಅನಿರೀಕ್ಷಿತ ತಿರುವು ಪಡೆದಿದ್ದು, ಯುಎಇ ಮೊದಲ ಬಾರಿಗೆ ಇರಾನ್ ವಿರುದ್ಧ ಯುದ್ಧಕ್ಕಿಳಿದಿದೆ. ಅಮೆರಿಕ ನಿರ್ಮಿತ ಡ್ರೋನ್‌ಗಳಿಂದ ಯುಎಇ ದಾಳಿ ನಡೆಸಿದ್ದು, ಬಂದರ್ ಅಬ್ಬಾಸ್ ಬಂದರನ್ನು ಗುರಿಯಾಗಿಸಿದೆ. ಇದಕ್ಕೆ ಪ್ರತಿಯಾಗಿ, ಇರಾನ್ ಯುಎಇಯ ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಅಮೆರಿಕದ ನಿರಂತರ ದಾಳಿಗಳಿಂದ ಕೆಂಡಾಮಂಡಲವಾಗಿರುವ ಇರಾನ್, ಹಾರ್ಮುಸ್ ಬಳಿ ಕೆಂಪು ಸಮುದ್ರವನ್ನು ಟಾರ್ಗೆಟ್ ಮಾಡಿದೆ.

ಕೆಂಪು ಸಮುದ್ರವನ್ನು ಬಂದ್ ಮಾಡುವ ಎಚ್ಚರಿಕೆ ನೀಡಿದ್ದು, ಇದು ಜಾಗತಿಕ ಇಂಧನ ಪೂರೈಕೆಗೆ ಅಡ್ಡಿಯಾಗುವ ಆತಂಕವನ್ನು ಹೆಚ್ಚಿಸಿದೆ. ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಕ್ಚಿ ಅಮೆರಿಕದ ಮೂಲಸೌಕರ್ಯ ಮೇಲಿನ ದಾಳಿಯನ್ನು ಯುದ್ಧಾಪರಾಧ ಮತ್ತು ಅಂತಾರಾಷ್ಟ್ರೀಯ ಕಾನೂನುಗಳ ಉಲ್ಲಂಘನೆ ಎಂದು ತೀವ್ರವಾಗಿ ಖಂಡಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More