AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ

ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ

ನಯನಾ ರಾಜೀವ್
|

Updated on:Jul 13, 2026 | 11:25 AM

Share

ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರಗೊಂಡಿದೆ. ಅಮೆರಿಕ ಇರಾನ್‌ನ ಒಮೈದಿಯಾ ಏರ್‌ಪೋರ್ಟ್ ಮೇಲೆ ಭೀಕರ ಬಾಂಬ್ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಇರಾನ್ ಅಮೆರಿಕದ ಸೇನಾ ನೆಲೆಗಳು, ಇಸ್ರೇಲ್ ಮತ್ತು ಕೆಲವು ಗಲ್ಫ್ ರಾಷ್ಟ್ರಗಳ ಮೇಲೆ ಕ್ಷಿಪಣಿ ಹಾಗೂ ಡ್ರೋನ್ ದಾಳಿ ನಡೆಸಿದೆ. ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ಜಾಗತಿಕವಾಗಿ ಯುದ್ಧದ ಭೀತಿ ಆವರಿಸಿದೆ.

ಟೆಹ್ರಾನ್, ಜುಲೈ 13: ಅಮೆರಿಕ ಮತ್ತು ಇರಾನ್ ನಡುವೆ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಅಮೆರಿಕವು ಇರಾನ್‌ನ ಮೇಲೆ ಐದನೇ ಸುತ್ತಿನ ದಾಳಿ ನಡೆಸಿದ್ದು, ಇರಾನ್‌ನ ಖುಜಿಸ್ತಾನ್ ಪ್ರಾಂತ್ಯದಲ್ಲಿರುವ ಒಮೈದಿಯಾ ಏರ್‌ಪೋರ್ಟ್ ಮೇಲೆ ಭೀಕರ ಬಾಂಬ್ ದಾಳಿ ನಡೆಸಿದೆ. ಇರಾನ್‌ನಿಂದ ಹಡಗುಗಳ ಮೇಲಿನ ದಾಳಿಯನ್ನು ಖಂಡಿಸಿ ಅಮೆರಿಕ ಈ ಕ್ರಮ ಕೈಗೊಂಡಿದೆ.

ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್ ಕೂಡ ಸುಮ್ಮನಿಲ್ಲ. ಅದು ಅಮೆರಿಕದ ಸೇನಾ ನೆಲೆಗಳು ಮತ್ತು ಇಸ್ರೇಲ್ ಮೇಲೆ ಕ್ಷಿಪಣಿ ಮಳೆ ಸುರಿಸಿದೆ. ಕತಾರ್, ಕುವೈತ್, ಓಮನ್, ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳ ಮೇಲೂ ಡ್ರೋನ್ ದಾಳಿ ನಡೆಸಿದೆ. ದುಬೈನ ಪಾಮ್ ಹೋಟೆಲ್‌ನಲ್ಲಿ ಸ್ಫೋಟ ಸಂಭವಿಸಿ, ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಅಲ್ಲಿಯೂ ದಾಳಿಯ ಆತಂಕವಿದೆ. ಖಮೇನಿ ಅಂತ್ಯಕ್ರಿಯೆ ಬಳಿಕ ಈ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ.

ಅಮೆರಿಕವು ಇರಾನ್‌ನ 140ಕ್ಕೂ ಹೆಚ್ಚು ಸೇನಾ ಮತ್ತು ವಾಣಿಜ್ಯ ಗುರಿಗಳನ್ನು ಧ್ವಂಸಗೊಳಿಸಿರುವುದಾಗಿ ಹೇಳಿಕೊಂಡರೆ, ಇರಾನ್ ತಾನು ಅಮೆರಿಕದ ನೆಲೆಗಳ ಮೇಲೆ ನಡೆಸಿದ ದಾಳಿಗಳ ವೀಡಿಯೊಗಳನ್ನು ಬಿಡುಗಡೆ ಮಾಡಿದೆ. ಈ ಸಂಘರ್ಷದಿಂದ ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ 70 ಡಾಲರ್‌ಗಳಿಂದ 80 ಡಾಲರ್‌ಗೆ ಏರಿದ್ದು, ವಿಶ್ವ ಆತಂಕದಲ್ಲಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Jul 13, 2026 11:24 AM

Follow Us