Video: ಅಮೆರಿಕ-ಇರಾನ್ ಶಾಂತಿ ಒಪ್ಪಂದ: 108 ದಿನಗಳ ಯುದ್ಧಕ್ಕೆ ತೆರೆ, ಪ್ರಮುಖ ಷರತ್ತುಗಳೇನು?

Updated on: Jun 15, 2026 | 11:03 AM

ಅಮೆರಿಕ ಮತ್ತು ಇರಾನ್ ನಡುವಿನ 108 ದಿನಗಳ ಸಂಘರ್ಷಕ್ಕೆ ಜೂನ್ 19 ರಂದು ಜಿನೇವಾದಲ್ಲಿ ಸಹಿ ಹಾಕುವ ಶಾಂತಿ ಒಪ್ಪಂದದೊಂದಿಗೆ ತೆರೆ ಬಿದ್ದಿದೆ. ಇರಾನ್ ಯುರೇನಿಯಂ ನಾಶಪಡಿಸುವುದು ಮತ್ತು ಹಾರ್ಮೋಸ್ ಜಲಸಂಧಿಯನ್ನು ಮುಕ್ತಗೊಳಿಸುವುದು ಪ್ರಮುಖ ಷರತ್ತುಗಳಾಗಿವೆ. ಇಸ್ರೇಲ್‌ನ ಕಾರ್ಯಗಳಿಂದ ಒಪ್ಪಂದಕ್ಕೆ ಅಡ್ಡಿಯಾಗಿದ್ದಕ್ಕೆ ಡೊನಾಲ್ಡ್ ಟ್ರಂಪ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟೆಹ್ರಾನ್, ಜೂನ್ 15: ಅಮೆರಿಕ ಮತ್ತು ಇರಾನ್ ನಡುವೆ ಸುಮಾರು 108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ ಬಿದ್ದಿದೆ. ಜೂನ್ 19 ರಂದು ಸ್ವಿಟ್ಜರ್ಲ್ಯಾಂಡ್‌ನ ಜಿನೇವಾದಲ್ಲಿ ಉಭಯ ರಾಷ್ಟ್ರಗಳ ನಡುವೆ ಬಹು ನಿರೀಕ್ಷಿತ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಾಗುವುದು. ಅಮೆರಿಕದ ರಾಜತಾಂತ್ರಿಕ ಪ್ರಯತ್ನಗಳು ಯಶಸ್ವಿಯಾಗಿದ್ದು, ಎರಡೂ ಕಡೆಯಿಂದ ಸಮ್ಮತಿ ದೊರೆತಿರುವ ಹಿನ್ನೆಲೆಯಲ್ಲಿ ಈ ಒಪ್ಪಂದ ನಿರ್ಣಾಯಕ ಘಟ್ಟ ತಲುಪಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರು ಜಿನೇವಾದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ವೈಯಕ್ತಿಕವಾಗಿ ಭಾಗವಹಿಸಿ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆಯಿದೆ.

ಈ ಐತಿಹಾಸಿಕ ಒಪ್ಪಂದವು ಒಟ್ಟು 14 ಪ್ರಮುಖ ಷರತ್ತುಗಳನ್ನು ಒಳಗೊಂಡಿದ್ದು, ಎರಡೂ ದೇಶಗಳ ಹಿತಾಸಕ್ತಿಗಳನ್ನು ಸಮತೋಲನಗೊಳಿಸಲು ಪ್ರಯತ್ನಿಸಲಾಗಿದೆ. ಅಮೆರಿಕದ ಪ್ರಮುಖ ಷರತ್ತುಗಳಲ್ಲಿ ಇರಾನ್ ತನ್ನ ಸಂವರ್ಧಿತ ಯುರೇನಿಯಂ ಅನ್ನು ಮುಂದಿನ ಎರಡು ತಿಂಗಳೊಳಗೆ ಸಂಪೂರ್ಣವಾಗಿ ನಾಶಪಡಿಸಬೇಕು ಎಂಬುದು ಪ್ರಮುಖವಾಗಿದೆ. ಪರಮಾಣು ವಸ್ತ್ರಗಳನ್ನು ಅಭಿವೃದ್ಧಿಪಡಿಸುವ ಇರಾನ್‌ನ ಸಾಮರ್ಥ್ಯವನ್ನು ತಡೆಯುವುದು ಅಮೆರಿಕದ ದೀರ್ಘಕಾಲದ ಉದ್ದೇಶವಾಗಿದೆ.

ಯುರೇನಿಯಂ ನಾಶಪಡಿಸಿದ ನಂತರವೇ ಇರಾನ್ ಮೇಲಿನ ಎಲ್ಲಾ ಆರ್ಥಿಕ ನಿರ್ಬಂಧಗಳನ್ನು ಅಮೆರಿಕ ತೆರವುಗೊಳಿಸಲಿದೆ ಎಂದು ತಿಳಿಸಲಾಗಿದೆ. ಅಲ್ಲದೆ, ಜಪ್ತಿ ಮಾಡಲಾದ ಇರಾನ್‌ನ ಸಂಪತ್ತನ್ನು ಕೂಡ ಬಿಡುಗಡೆ ಮಾಡುವುದಾಗಿ ಅಮೆರಿಕ ಭರವಸೆ ನೀಡಿದೆ. ಷರತ್ತುಗಳ ಬಗ್ಗೆ ಹೆಚ್ಚಿನ ಮಾಹಿತಿ ಈ ವಿಡಿಯೋದಲ್ಲಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More