AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಮೊದಲ ಬಾರಿ ಕಡಲ ಡ್ರೋನ್ ದಾಳಿ

ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಮೊದಲ ಬಾರಿ ಕಡಲ ಡ್ರೋನ್ ದಾಳಿ

ಸುಷ್ಮಾ ಚಕ್ರೆ
|

Updated on: Jul 13, 2026 | 10:55 PM

Share

ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ಉಲ್ಬಣಗೊಂಡಿರುವ ಬೆನ್ನಲ್ಲೇ ಅಮೆರಿಕ ಸೇನೆಯು ಇರಾನ್‌ನಲ್ಲಿರುವ ಜಲಾಂತರ್ಗಾಮಿ ಮತ್ತು ಯುದ್ಧನೌಕೆಗಳ ನಿರ್ವಹಣಾ ಕೇಂದ್ರದ ಮೇಲೆ ಭಾರಿ ದಾಳಿ ನಡೆಸಿದೆ. ಅಮೆರಿಕ ಈ ದಾಳಿಯ ವಿಡಿಯೋ ಬಿಡುಗಡೆ ಮಾಡಿದೆ. ಇದೇ ಮೊದಲ ಬಾರಿಗೆ ಅಮೆರಿಕ ಪಡೆಗಳು ಯುದ್ಧ ಕಾರ್ಯಾಚರಣೆಯಲ್ಲಿ ಅತ್ಯಾಧುನಿಕ 'ಸೀ ಡ್ರೋನ್' ಅಥವಾ ಸ್ವಯಂಚಾಲಿತ ಕಡಲ ಡ್ರೋನ್‌ಗಳನ್ನು ಬಳಸಿರುವುದು ಈ ದಾಳಿಯ ವಿಶೇಷತೆಯಾಗಿದೆ.

ಟೆಹ್ರಾನ್, ಜುಲೈ 13: ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ಉಲ್ಬಣಗೊಂಡಿರುವ ಬೆನ್ನಲ್ಲೇ ಅಮೆರಿಕ ಸೇನೆಯು ಇರಾನ್‌ನಲ್ಲಿರುವ (Iran War) ಜಲಾಂತರ್ಗಾಮಿ ಮತ್ತು ಯುದ್ಧನೌಕೆಗಳ ನಿರ್ವಹಣಾ ಕೇಂದ್ರದ ಮೇಲೆ ಭಾರಿ ದಾಳಿ ನಡೆಸಿದೆ. ಅಮೆರಿಕ ಈ ದಾಳಿಯ ವಿಡಿಯೋ ಬಿಡುಗಡೆ ಮಾಡಿದೆ. ಇದೇ ಮೊದಲ ಬಾರಿಗೆ ಅಮೆರಿಕ ಪಡೆಗಳು ಯುದ್ಧ ಕಾರ್ಯಾಚರಣೆಯಲ್ಲಿ ಅತ್ಯಾಧುನಿಕ ‘ಸೀ ಡ್ರೋನ್’ ಅಥವಾ ಸ್ವಯಂಚಾಲಿತ ಕಡಲ ಡ್ರೋನ್‌ಗಳನ್ನು ಬಳಸಿರುವುದು ಈ ದಾಳಿಯ ವಿಶೇಷತೆಯಾಗಿದೆ.

ಯುಎಸ್ ಸೆಂಟ್ರಲ್ ಕಮಾಂಡ್ (CENTCOM) ತನ್ನ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದೆ. ಅಮೆರಿಕ ಪಡೆಗಳು ಭಾನುವಾರ ಇರಾನ್‌ನ ಅತ್ಯಂತ ನಿರ್ಣಾಯಕ ಜಲಮಾರ್ಗವಾಗಿರುವ ‘ಬಂದರ್ ಅಬ್ಬಾಸ್’ ಪೋರ್ಟ್ ಮೇಲೆ ದಾಳಿ ನಡೆಸಿವೆ. ಮೂರು ‘ಕೋರ್ಸೇರ್’ ಹೆಸರಿನ ಒನ್-ವೇ ಅಟ್ಯಾಕ್ ಕಡಲ ಡ್ರೋನ್‌ಗಳನ್ನು ಬಳಸಿ ಇರಾನ್‌ನ ಜಲಾಂತರ್ಗಾಮಿ ಮತ್ತು ಹಡಗುಗಳ ರಿಪೇರಿ ಹಾಗೂ ನಿರ್ವಹಣಾ ಕೇಂದ್ರವನ್ನು ಯಶಸ್ವಿಯಾಗಿ ಧ್ವಂಸಗೊಳಿಸಲಾಗಿದೆ ಎಂದು ತಿಳಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More