AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ಮುಜ್ ಜಲಸಂಧಿ ಮಾರ್ಗ ತೆರೆಯುವ ಸುಳಿವು ನೀಡಿದ ಟ್ರಂಪ್

ಹಾರ್ಮುಜ್ ಜಲಸಂಧಿ ಮಾರ್ಗ ತೆರೆಯುವ ಸುಳಿವು ನೀಡಿದ ಟ್ರಂಪ್

ಸುಷ್ಮಾ ಚಕ್ರೆ
|

Updated on: May 24, 2026 | 12:39 PM

Share

ಜಾಗತಿಕ ನಾಯಕರೊಂದಿಗೆ ಉನ್ನತ ಮಟ್ಟದ ಮಾತುಕತೆಈ ಒಪ್ಪಂದವನ್ನು ಅಂತಿಮಗೊಳಿಸುವ ಮುನ್ನ ಟ್ರಂಪ್ ಅವರು ಮಧ್ಯಪ್ರಾಚ್ಯದ ಪ್ರಮುಖ ರಾಷ್ಟ್ರಗಳ ನಾಯಕರೊಂದಿಗೆ ಸುದೀರ್ಘ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಸೌದಿ ಅರೇಬಿಯಾ, ಯುಎಇ (UAE), ಕತಾರ್, ಈಜಿಪ್ಟ್, ಜೋರ್ಡಾನ್, ಬಹ್ರೇನ್, ಟರ್ಕಿ ಮತ್ತು ಈ ಒಪ್ಪಂದಕ್ಕೆ ಮಧ್ಯಸ್ಥಿಕೆ ವಹಿಸುತ್ತಿರುವ ಪಾಕಿಸ್ತಾನದ ನಾಯಕರೊಂದಿಗೆ ಅವರು ಚರ್ಚಿಸಿದ್ದಾರೆ. ಇದಲ್ಲದೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೂ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದು, ಅದು ಯಶಸ್ವಿಯಾಗಿದೆ ಎಂದು ತಿಳಿಸಿದ್ದಾರೆ.

ವಾಷಿಂಗ್ಟನ್, ಮೇ 24: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೊತೆಗಿನ ಶಾಂತಿ ಒಪ್ಪಂದ ಹಾಗೂ ಜಾಗತಿಕ ಇಂಧನ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಸಂಚಾರಕ್ಕೆ ಮುಕ್ತಗೊಳಿಸುವ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ. ಡೊನಾಲ್ಡ್ ಟ್ರಂಪ್ ಅವರು ಈ ಬಗ್ಗೆ ತಮ್ಮ ‘ಟ್ರುತ್ ಸೋಶಿಯಲ್’ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇರಾನ್ ಹಾಗೂ ಇತರ ಸಂಬಂಧಿತ ದೇಶಗಳೊಂದಿಗೆ ಶಾಂತಿಗೆ ಸಂಬಂಧಿಸಿದ ‘ತಿಳಿವಳಿಕೆ ಪತ್ರ’ (MoU) ಬಹುತೇಕ ಅಂತಿಮ ಹಂತಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ. ಈ ಒಪ್ಪಂದದ ಅತ್ಯಂತ ಪ್ರಮುಖ ಭಾಗವಾಗಿ ಫೆಬ್ರವರಿಯಿಂದ ಮುಚ್ಚಲ್ಪಟ್ಟಿದ್ದ ಹಾರ್ಮುಜ್ ಜಲಸಂಧಿಯನ್ನು ಜಾಗತಿಕ ಹಡಗು ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಇದರಿಂದ ಇತರೆ ದೇಶಗಳು ಕೂಡ ನಿಟ್ಟುಸಿರು ಬಿಡುವಂತಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us