ಹಾರ್ಮುಜ್ ಜಲಸಂಧಿ ಮಾರ್ಗ ತೆರೆಯುವ ಸುಳಿವು ನೀಡಿದ ಟ್ರಂಪ್
ಜಾಗತಿಕ ನಾಯಕರೊಂದಿಗೆ ಉನ್ನತ ಮಟ್ಟದ ಮಾತುಕತೆಈ ಒಪ್ಪಂದವನ್ನು ಅಂತಿಮಗೊಳಿಸುವ ಮುನ್ನ ಟ್ರಂಪ್ ಅವರು ಮಧ್ಯಪ್ರಾಚ್ಯದ ಪ್ರಮುಖ ರಾಷ್ಟ್ರಗಳ ನಾಯಕರೊಂದಿಗೆ ಸುದೀರ್ಘ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಸೌದಿ ಅರೇಬಿಯಾ, ಯುಎಇ (UAE), ಕತಾರ್, ಈಜಿಪ್ಟ್, ಜೋರ್ಡಾನ್, ಬಹ್ರೇನ್, ಟರ್ಕಿ ಮತ್ತು ಈ ಒಪ್ಪಂದಕ್ಕೆ ಮಧ್ಯಸ್ಥಿಕೆ ವಹಿಸುತ್ತಿರುವ ಪಾಕಿಸ್ತಾನದ ನಾಯಕರೊಂದಿಗೆ ಅವರು ಚರ್ಚಿಸಿದ್ದಾರೆ. ಇದಲ್ಲದೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೂ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದು, ಅದು ಯಶಸ್ವಿಯಾಗಿದೆ ಎಂದು ತಿಳಿಸಿದ್ದಾರೆ.
ವಾಷಿಂಗ್ಟನ್, ಮೇ 24: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೊತೆಗಿನ ಶಾಂತಿ ಒಪ್ಪಂದ ಹಾಗೂ ಜಾಗತಿಕ ಇಂಧನ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಸಂಚಾರಕ್ಕೆ ಮುಕ್ತಗೊಳಿಸುವ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ. ಡೊನಾಲ್ಡ್ ಟ್ರಂಪ್ ಅವರು ಈ ಬಗ್ಗೆ ತಮ್ಮ ‘ಟ್ರುತ್ ಸೋಶಿಯಲ್’ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇರಾನ್ ಹಾಗೂ ಇತರ ಸಂಬಂಧಿತ ದೇಶಗಳೊಂದಿಗೆ ಶಾಂತಿಗೆ ಸಂಬಂಧಿಸಿದ ‘ತಿಳಿವಳಿಕೆ ಪತ್ರ’ (MoU) ಬಹುತೇಕ ಅಂತಿಮ ಹಂತಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ. ಈ ಒಪ್ಪಂದದ ಅತ್ಯಂತ ಪ್ರಮುಖ ಭಾಗವಾಗಿ ಫೆಬ್ರವರಿಯಿಂದ ಮುಚ್ಚಲ್ಪಟ್ಟಿದ್ದ ಹಾರ್ಮುಜ್ ಜಲಸಂಧಿಯನ್ನು ಜಾಗತಿಕ ಹಡಗು ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಇದರಿಂದ ಇತರೆ ದೇಶಗಳು ಕೂಡ ನಿಟ್ಟುಸಿರು ಬಿಡುವಂತಾಗಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
