4 ವರ್ಷಗಳ ಬಳಿಕ ವೈಟ್​ಹೌಸ್​ನಲ್ಲಿ ಡೊನಾಲ್ಡ್ ಟ್ರಂಪ್-ಜೋ ಬೈಡೆನ್ ಭೇಟಿ

4 ವರ್ಷಗಳ ಬಳಿಕ ವೈಟ್​ಹೌಸ್​ನಲ್ಲಿ ಡೊನಾಲ್ಡ್ ಟ್ರಂಪ್-ಜೋ ಬೈಡೆನ್ ಭೇಟಿ

ಸುಷ್ಮಾ ಚಕ್ರೆ
|

Updated on: Nov 13, 2024 | 10:32 PM

ಅಮೆರಿಕದ ಶ್ವೇತಭವನದಲ್ಲಿ ಯುಎಸ್ ನಿರ್ಗಮಿತ ಅಧ್ಯಕ್ಷ ಜೋ ಬೈಡೆನ್ ಅವರೊಂದಿಗೆ ಇದೀಗ ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಜೋ ಬೈಡೆನ್​​ನಿಂದ ಅಧಿಕಾರದ ಶಾಂತಿಯುತ ಹಸ್ತಾಂತರದ ಸಂಕೇತ ಇದಾಗಿದೆ.

ವಾಷಿಂಗ್ಟನ್: ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಂದು ನಿರ್ಗಮಿತ ಅಧ್ಯಕ್ಷ ಜೋ ಬೈಡೆನ್ ಅವರನ್ನು ಭೇಟಿಯಾಗಿದ್ದಾರೆ. ಓವಲ್ ಆಫೀಸ್ ಸಭೆಯಲ್ಲಿ ಜೋ ಬೈಡೆನ್ ಡೊನಾಲ್ಡ್​ ಟ್ರಂಪ್ ಅವರನ್ನು ಹ್ಯಾಂಡ್‌ಶೇಕ್‌ ಮಾಡುವ ಮೂಲಕ ಸ್ವಾಗತಿಸಿದರು. 2020ರ ಯುಎಸ್ ಚುನಾವಣೆಯಲ್ಲಿ ಡೊನಾಲ್ಡ್​ ಟ್ರಂಪ್ ಅವರನ್ನು ಜೋ ಬೈಡೆನ್ ಸೋಲಿಸಿದ ನಂತರ ಈ ಇಬ್ಬರು ಪ್ರತಿಸ್ಪರ್ಧಿಗಳ ನಡುವೆ ನಡೆದ ಮೊದಲ ಸಭೆ ಇದಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ