AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ಯುಎಸ್ ಕಾರ್ಯದರ್ಶಿ ರೂಬಿಯೋ

ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ಯುಎಸ್ ಕಾರ್ಯದರ್ಶಿ ರೂಬಿಯೋ

ಸುಷ್ಮಾ ಚಕ್ರೆ
|

Updated on: May 26, 2026 | 4:15 PM

Share

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ರೂಬಿಯೋ ಅವರ ಆಗ್ರಾ ಭೇಟಿಯು ಅವರ 4 ದಿನಗಳ ಭಾರತ ಪ್ರವಾಸದ ಭಾಗವಾಗಿದೆ. ಅವರು ಕೊಲ್ಕತ್ತಾದ ಮಿಷನರೀಸ್ ಆಫ್ ಚಾರಿಟಿಗೆ ಭೇಟಿ ನೀಡುವ ಮೂಲಕ ತಮ್ಮ ಭಾರತ ಪ್ರವಾಸವನ್ನು ಪ್ರಾರಂಭಿಸಿದರು. ಆ ನಂತರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರೊಂದಿಗೆ ನಿಯೋಗ ಮಟ್ಟದ ಮಾತುಕತೆ ನಡೆಸಿದರು. ಇದರ ಜೊತೆಗೆ ರೂಬಿಯೋ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೂ ಚರ್ಚೆ ನಡೆಸಿದ್ದಾರೆ. ತಾಜ್​ ಮಹಲ್​ಗೆ ಅವರು ಪತ್ನಿ ಜೊತೆ ಭೇಟಿ ನೀಡಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ಭಾರತದಲ್ಲಿನ ಅಮೆರಿಕ ರಾಯಭಾರಿ ಸೆರ್ಗಿಯೋ ಗೋರ್ ಕೂಡ ಅವರೊಂದಿಗಿದ್ದರು.

ಆಗ್ರಾ, ಮೇ 26: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ (Marco Rubio) ತಮ್ಮ ಪತ್ನಿ ಜೀನೆಟ್ ರೂಬಿಯೋ ಅವರೊಂದಿಗೆ ಆಗ್ರಾದಲ್ಲಿರುವ ಐತಿಹಾಸಿಕ ತಾಜ್ ಮಹಲ್‌ಗೆ ಭೇಟಿ ನೀಡಿದ್ದಾರೆ. ಈ ವೇಳೆ ತಾಜ್ ಮಹಲ್ ಸೌಂದರ್ಯವನ್ನು ಹೊಗಳಿದ ರೂಬಿಯೋ ಈ ಸ್ಮಾರಕವನ್ನು ವಿಶ್ವದ ಅತ್ಯಮೂಲ್ಯ ನಿಧಿಗಳಲ್ಲಿ ಒಂದೆಂದು ಶ್ಲಾಘಿಸಿದ್ದಾರೆ. ತಾಜ್ ಮಹಲ್‌ನಲ್ಲಿ ಸುಮಾರು ಒಂದೂವರೆ ಗಂಟೆ ಕಾಲ ಕಳೆದ ದಂಪತಿ ಅಲ್ಲಿನ ಸಂದರ್ಶಕರ ಪುಸ್ತಕದಲ್ಲಿ (Visitors Book) “ವಿಶ್ವದ ನಿಜವಾದ ನಿಧಿಗಳಲ್ಲಿ ಒಂದನ್ನು ವೀಕ್ಷಿಸಲು ನಮಗೆ ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಧನ್ಯವಾದಗಳು” ಎಂದು ಬರೆದಿದ್ದಾರೆ.

ವಿಶ್ವದ 7 ಅದ್ಭುತಗಳಲ್ಲಿ ಒಂದಾದ ತಾಜ್ ಮಹಲ್, ಭಾರತಕ್ಕೆ ಭೇಟಿ ನೀಡುವ ಜಾಗತಿಕ ಮಟ್ಟದ ಉನ್ನತ ನಾಯಕರು ಮತ್ತು ಗಣ್ಯರನ್ನು ಸತತವಾಗಿ ಆಕರ್ಷಿಸುತ್ತಲೇ ಬಂದಿದೆ. ಕಳೆದ ವರ್ಷ, ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರು ತಮ್ಮ ಪತ್ನಿ ಉಷಾ ವ್ಯಾನ್ಸ್ ಮತ್ತು ಮಕ್ಕಳಾದ ವಿವೇಕ್, ಮಿರಾಬೆಲ್ ಮತ್ತು ಇವಾನ್ ಅವರೊಂದಿಗೆ ಈ ಸ್ಮಾರಕಕ್ಕೆ ಭೇಟಿ ನೀಡಿದ್ದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ತಮ್ಮ ಮೊದಲ ಅಧಿಕಾರಾವಧಿಯಲ್ಲಿ ಪತ್ನಿ ಮೆಲಾನಿಯಾ ಟ್ರಂಪ್ ಅವರೊಂದಿಗೆ ತಾಜ್ ಮಹಲ್‌ಗೆ ಭೇಟಿ ನೀಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More