AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಿಂದ ಇರಾನ್ ಮೇಲೆ ಮತ್ತೆ ಭೀಕರ ದಾಳಿ: ಅಲಿ ಖಮೇನಿ ಅಂತ್ಯಕ್ರಿಯೆಗೂ ಮುನ್ನ ಉದ್ವಿಗ್ನತೆ

ಅಮೆರಿಕದಿಂದ ಇರಾನ್ ಮೇಲೆ ಮತ್ತೆ ಭೀಕರ ದಾಳಿ: ಅಲಿ ಖಮೇನಿ ಅಂತ್ಯಕ್ರಿಯೆಗೂ ಮುನ್ನ ಉದ್ವಿಗ್ನತೆ

ನಯನಾ ರಾಜೀವ್
|

Updated on: Jul 09, 2026 | 7:46 AM

Share

ಅಮೆರಿಕವು ಇರಾನ್‌ನ ಮೇಲೆ ಮತ್ತೊಮ್ಮೆ ಭೀಕರ ದಾಳಿಯನ್ನು ನಡೆಸಿದ್ದು, ಈಗಾಗಲೇ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ. ನಿನ್ನೆಯಷ್ಟೇ ಮೂರು ಪ್ರಮುಖ ಸ್ಥಳಗಳ ಮೇಲೆ ದಾಳಿ ಮಾಡಿದ್ದ ಅಮೆರಿಕ, ಇದೀಗ ಮತ್ತೆ ಆಕ್ರಮಣವನ್ನು ಮುಂದುವರಿಸಿದೆ. ಬುಶೆಹರ್‌ನಲ್ಲಿರುವ ಪರಮಾಣು ವಿದ್ಯುತ್ ಸ್ಥಾವರ ಪ್ರದೇಶ ಮತ್ತು ಇರಾನ್‌ನ ಚಬಹಾರ್ ಪ್ರಾಂತ್ಯಗಳನ್ನು ಗುರಿಯಾಗಿಸಿಕೊಂಡು ಈ ದಾಳಿಗಳನ್ನು ನಡೆಸಲಾಗಿದೆ. ಅಮೆರಿಕದ ಈ ಕಾರ್ಯಾಚರಣೆಗಳನ್ನು ಯುಎಸ್‌ ಸೆಂಟ್ರಲ್ ಕಮಾಂಡ್ ದೃಢಪಡಿಸಿದೆ.

ಟೆಹ್ರಾನ್, ಜುಲೈ 09: ಅಮೆರಿಕವು ಇರಾನ್‌ನ ಮೇಲೆ ಮತ್ತೊಮ್ಮೆ ಭೀಕರ ದಾಳಿಯನ್ನು ನಡೆಸಿದ್ದು, ಈಗಾಗಲೇ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ. ನಿನ್ನೆಯಷ್ಟೇ ಮೂರು ಪ್ರಮುಖ ಸ್ಥಳಗಳ ಮೇಲೆ ದಾಳಿ ಮಾಡಿದ್ದ ಅಮೆರಿಕ, ಇದೀಗ ಮತ್ತೆ ಆಕ್ರಮಣವನ್ನು ಮುಂದುವರಿಸಿದೆ. ಬುಶೆಹರ್‌ನಲ್ಲಿರುವ ಪರಮಾಣು ವಿದ್ಯುತ್ ಸ್ಥಾವರ ಪ್ರದೇಶ ಮತ್ತು ಇರಾನ್‌ನ ಚಬಹಾರ್ ಪ್ರಾಂತ್ಯಗಳನ್ನು ಗುರಿಯಾಗಿಸಿಕೊಂಡು ಈ ದಾಳಿಗಳನ್ನು ನಡೆಸಲಾಗಿದೆ. ಅಮೆರಿಕದ ಈ ಕಾರ್ಯಾಚರಣೆಗಳನ್ನು ಯುಎಸ್‌ ಸೆಂಟ್ರಲ್ ಕಮಾಂಡ್ ದೃಢಪಡಿಸಿದೆ.

ಡೊನಾಲ್ಡ್ ಟ್ರಂಪ್ ಅವರು ಒಪ್ಪಂದ ಅಂತ್ಯ ಮತ್ತು ರಾತ್ರಿ ದಾಳಿ ಕುರಿತ ಎಚ್ಚರಿಕೆಗಳನ್ನು ನೀಡಿದ ಬೆನ್ನಲ್ಲೇ ಈ ಆಕ್ರಮಣಗಳು ನಡೆದಿದ್ದು, ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಪ್ರಮುಖವಾಗಿ, ಇಂದು ಆಯತೊಲ್ಲಾ ಅಲಿ ಖಮನೈ ಅವರ ಅಂತ್ಯಕ್ರಿಯೆ ನಡೆಯುವ ಮುನ್ನವೇ ಈ ದಾಳಿಗಳು ಸಂಭವಿಸಿವೆ.

ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್ ಸಹ ಪ್ರತಿದಾಳಿ ನಡೆಸಿದೆ. ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯುನೆಲೆಗಳಾದ ಬಹ್ರೇನ್ ಮತ್ತು ಕುವೈತ್ ಸೇರಿದಂತೆ ಇತರ ಪ್ರದೇಶಗಳಲ್ಲಿ ಇರಾನ್ ದಾಳಿ ನಡೆಸಿದೆ. ಅಮೆರಿಕದ ಒಂದು ದಾಳಿಗೆ ನಾವು ಎರಡು ದಾಳಿಗಳನ್ನು ನಡೆಸುತ್ತೇವೆ ಎಂದು ಇರಾನ್ ಪ್ರತಿಜ್ಞೆ ಮಾಡಿದೆ. ಇರಾನ್ ಸಂಸತ್ತಿನ ವಕ್ತಾರರು ಅಮೆರಿಕಕ್ಕೆ ಎಚ್ಚರಿಕೆ ನೀಡಿದ್ದು, ಖಾರ್ಗ್ ದ್ವೀಪವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದರೆ, ಅಮೆರಿಕದ ಒಬ್ಬ ಸೈನಿಕನೂ ಜೀವಂತವಾಗಿ ಹಿಂದಿರುಗುವುದಿಲ್ಲ ಎಂದಿದ್ದಾರೆ. ಯುದ್ಧದ ಭೀತಿ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us