Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿಯನ್ನು ಶ್ಲಾಘಿಸಿದ ಗೂಗಲ್ ಮತ್ತು ನಿವಿಡಿಯಾ ಸಿಇಒಗಳು

ನರೇಂದ್ರ ಮೋದಿಯನ್ನು ಶ್ಲಾಘಿಸಿದ ಗೂಗಲ್ ಮತ್ತು ನಿವಿಡಿಯಾ ಸಿಇಒಗಳು

ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 23, 2024 | 11:40 AM

US tech CEOs praise Narendra Modi: ಗೂಗಲ್ ಸಿಇಒ ಸುಂದರ್ ಪಿಚೈ ಮತ್ತು ನಿವಿಡಿಯಾ ಸಿಇಒ ಜೆನ್ಸೆನ್ ಹುವಾಂಗ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದಾರೆ. ಮೋದಿ ಅವರ ಅಮೆರಿಕ ಪ್ರವಾಸದ ವೇಳೆ ಇವರು ಭೇಟಿಯಾಗಿದ್ದರು.

ನ್ಯೂಯಾರ್ಕ್, ಸೆಪ್ಟೆಂಬರ್ 23: ಪ್ರಧಾನಿ ನರೇಂದ್ರ ಮೋದಿ 3 ದಿನಗಳ ಅಮೆರಿಕಾ ಪ್ರವಾಸದ ವೇಳೆ ಇಲ್ಲಿ 15 ಟೆಕ್ ಸಿಇಒಗಳ ಜೊತೆ ದುಂಡು ಮೇಜಿನ ಸಭೆ ನಡೆಸಿದರು. ಗೂಗಲ್ ಸಿಇಒ ಸುಂದರ್ ಪಿಚೈ ಮತ್ತು ನಿವಿಡಿಯಾ ಸಿಇಒ ಜೆನ್ಸೆನ್ ಹುವಾಂಗ್ ಮೊದಲಾದವರು ಪಾಲ್ಗೊಂಡಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಸುಂದರ್ ಪಿಚೈ, ಭಾರತದ ಜನರಿಗೆ ಉಪಯೋಗವಾಗುವ ರೀತಿಯಲ್ಲಿ ಎಐ ಬೆಳವಣಿಗೆ ಆಗಬೇಕೆಂದು ಮೋದಿ ಬಯಸುತ್ತಾರೆ ಎಂದಿದ್ದಾರೆ. ಸೆಮಿಕಂಡಕ್ಟರ್ ಚಿಪ್ ಕಂಪನಿ ನಿವಿಡಿಯಾದ ಸಿಇಒ ಜೆನ್ಸೆನ್ ಹುವಾಂಗ್ ಮಾತನಾಡಿ, ತಂತ್ರಜ್ಞಾನದ ಬಗ್ಗೆ ನಿರಂತರವಾಗಿ ತಿಳಿದುಕೊಳ್ಳಲು ಬಯಸುವ ಅಪೂರ್ವ ವಿದ್ಯಾರ್ಥಿಗೆ ನರೇಂದ್ರ ಮೋದಿ ಅವರನ್ನು ಹೋಲಿಸುತ್ತಾ ಶ್ಲಾಘಿಸಿದ್ದಾರೆ.