ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಹೇಳಿದ್ದೇನು?
ಉತ್ತರ ಪ್ರದೇಶದ ಆಗ್ರಾದಲ್ಲಿ ಪಹಲ್ಗಾಮ್ ದಾಳಿಯ ಕುರಿತು ಭಾರತ ಪ್ರವಾಸದಲ್ಲಿರುವ ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಇಂದು ಪ್ರತಿಕ್ರಿಯಿಸಿದ್ದಾರೆ. ಈ ಭೀಕರ ಭಯೋತ್ಪಾದನಾ ದಾಳಿಯಿಂದ ಬಾಧಿತರಾದ ಕಾಶ್ಮೀರದ ಜನರಿಗೆ ನಮ್ಮ ಸಂತಾಪಗಳು. ಅಮೆರಿಕದ ಅಧ್ಯಕ್ಷರು ಈಗಾಗಲೇ ಪ್ರಧಾನಿ ಮೋದಿಯವರೊಂದಿಗೆ ಮಾತನಾಡಿದ್ದಾರೆ. ಸರ್ಕಾರ ಮತ್ತು ಭಾರತದ ಜನರಿಗೆ ನಾವು ನಮ್ಮ ಕೈಲಾದ ಸಹಾಯವನ್ನು ನಾವು ನೀಡುತ್ತಿದ್ದೇವೆ ಎಂದಿದ್ದಾರೆ.
ನವದೆಹಲಿ, ಏಪ್ರಿಲ್ 23: 4 ದಿನಗಳ ಭಾರತ ಭೇಟಿಯಲ್ಲಿರುವ ಯುನೈಟೆಡ್ ಸ್ಟೇಟ್ಸ್ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Terror Attack) ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಸಂತಾಪ ಸೂಚಿಸಿದ್ದಾರೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಪಹಲ್ಗಾಮ್ ಭಯೋತ್ಪಾದನಾ ದಾಳಿಯ ಕುರಿತು ಭಾರತ ಪ್ರವಾಸದಲ್ಲಿರುವ ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಇಂದು ಪ್ರತಿಕ್ರಿಯಿಸಿದ್ದಾರೆ. ಈ ಭೀಕರ ಭಯೋತ್ಪಾದನಾ ದಾಳಿಯಿಂದ ಬಾಧಿತರಾದ ಕಾಶ್ಮೀರದ ಜನರಿಗೆ ನಮ್ಮ ಸಂತಾಪಗಳು. ನಮ್ಮ ದೇಶದ ಅಧ್ಯಕ್ಷ ಟ್ರಂಪ್ ಈಗಾಗಲೇ ಪ್ರಧಾನಿ ಮೋದಿಯವರೊಂದಿಗೆ (PM Narendra Modi) ಮಾತನಾಡಿದ್ದಾರೆ. ಸರ್ಕಾರ ಮತ್ತು ಭಾರತದ ಜನರಿಗೆ ನಾವು ನಮ್ಮ ಕೈಲಾದ ಸಹಾಯವನ್ನು ನಾವು ನೀಡುತ್ತಿದ್ದೇವೆ ಎಂದಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ