ಅಮೆರಿಕದ ಜೊತೆ ಆಟವಾಡಬೇಡಿ; ಪಾಕಿಸ್ತಾನಕ್ಕೆ ಹೊರಡುವ ಮುನ್ನ ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ

Updated on: Apr 10, 2026 | 9:17 PM

ಇರಾನ್ ಜೊತೆ ಶಾಂತಿ ಮಾತುಕತೆಗಾಗಿ ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಪಾಕಿಸ್ತಾನಕ್ಕೆ ತೆರಳಿದ್ದಾರೆ. ಈ ವೇಳೆ ಅವರು ಅಮೆರಿಕದ ಜೊತೆ ಆಟವಾಡಬೇಡಿ ಎಂದು ಟೆಹ್ರಾನ್‌ಗೆ ಎಚ್ಚರಿಕೆ ನೀಡಿದ್ದಾರೆ. "ನಾವು ಮಾತುಕತೆಯನ್ನು ಎದುರು ನೋಡುತ್ತಿದ್ದೇವೆ. ಅದು ಸಕಾರಾತ್ಮಕವಾಗಿರುತ್ತದೆ ಎಂದು ನಾನು ಭಾವಿಸುತ್ತೇನೆ. ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿದಂತೆ ಇರಾನಿಯನ್ನರು ಉತ್ತಮ ನಂಬಿಕೆಯಿಂದ ಮಾತುಕತೆ ನಡೆಸಲು ಸಿದ್ಧರಿದ್ದರೆ ನಾವು ಖಂಡಿತವಾಗಿಯೂ ಮುಕ್ತವಾಗಿ ಕೈ ಚಾಚಲು ಸಿದ್ಧರಿದ್ದೇವೆ. ಆದರೆ, ಅಮೆರಿಕದ ಜೊತೆ ಆಟವಾಡಿದರೆ ನಾವು ಸುಮ್ಮನಿರುವುದಿಲ್ಲ" ಎಂದು ಹೇಳಿದ್ದಾರೆ.

ವಾಷಿಂಗ್ಟನ್, ಏಪ್ರಿಲ್ 10: ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ (JD Vance) ಇಂದು ಇರಾನ್ ಜೊತೆ ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನಕ್ಕೆ (Pakistan) ತೆರಳಿದ್ದಾರೆ. ಈ ವೇಳೆ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಜೆಡಿ ವ್ಯಾನ್ಸ್, “ನಾವು ಮಾತುಕತೆಯನ್ನು ಎದುರು ನೋಡುತ್ತಿದ್ದೇವೆ. ಅದು ಸಕಾರಾತ್ಮಕವಾಗಿರುತ್ತದೆ ಎಂದು ನಾನು ಭಾವಿಸುತ್ತೇನೆ. ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿದಂತೆ ಇರಾನಿಯನ್ನರು ಉತ್ತಮ ನಂಬಿಕೆಯಿಂದ ಮಾತುಕತೆ ನಡೆಸಲು ಸಿದ್ಧರಿದ್ದರೆ ನಾವು ಖಂಡಿತವಾಗಿಯೂ ಮುಕ್ತವಾಗಿ ಕೈ ಚಾಚಲು ಸಿದ್ಧರಿದ್ದೇವೆ. ಆದರೆ, ಅಮೆರಿಕದ ಜೊತೆ ಆಟವಾಡಿದರೆ ನಾವು ಸುಮ್ಮನಿರುವುದಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More