AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಜರಾಯಿ ದೇವಾಲಯಗಳಲ್ಲಿ ಸಂಸ್ಕೃತ ಬದಲು ಕನ್ನಡದಲ್ಲೇ ಶ್ಲೋಕ

ಮುಜರಾಯಿ ದೇವಾಲಯಗಳಲ್ಲಿ ಸಂಸ್ಕೃತ ಬದಲು ಕನ್ನಡದಲ್ಲೇ ಶ್ಲೋಕ

ರಮೇಶ್ ಬಿ. ಜವಳಗೇರಾ
|

Updated on: Aug 14, 2025 | 10:45 PM

Share

ಕರ್ನಾಟಕದ ಮುಜರಾಯಿ ದೇವಾಲಯಗಳಲ್ಲಿ ಪೂಜೆ ಮಾಡುವಾಗ ಕನ್ನಡದಲ್ಲಿ ಶ್ಲೋಕ ಹೇಳಬೇಕು, ಹೀಗಾಗಿ ಕನ್ನಡ ಶ್ಲೋಕ ಕಲಿಯಲು ಸೂಚನೆ ಕೊಡುವುದಾಗಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಕನ್ನಡದ ಶ್ಲೋಕದ ಬಗ್ಗೆ ಪ್ರಸ್ತಾಪಿಸಿದ್ದು, ನಮ್ಮ ಮುಜರಾಯಿ ದೇವಾಲಯಗಳಲ್ಲಿ ಪೂಜೆ ಮಾಡುವಾಗ ಶ್ಲೋಕಗಳನ್ನು ಸಂಸ್ಕೃತದಲ್ಲಿ ಹೇಳುತ್ತಿದ್ದಾರೆ

ಬೆಂಗಳೂರು, (ಆಗಸ್ಟ್ 14): ಕರ್ನಾಟಕದ ಮುಜರಾಯಿ ದೇವಾಲಯಗಳಲ್ಲಿ ಪೂಜೆ ಮಾಡುವಾಗ ಕನ್ನಡದಲ್ಲಿ ಶ್ಲೋಕ ಹೇಳಬೇಕು, ಹೀಗಾಗಿ ಕನ್ನಡ ಶ್ಲೋಕ ಕಲಿಯಲು ಸೂಚನೆ ಕೊಡುವುದಾಗಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಕನ್ನಡದ ಶ್ಲೋಕದ ಬಗ್ಗೆ ಪ್ರಸ್ತಾಪಿಸಿದ್ದು, ನಮ್ಮ ಮುಜರಾಯಿ ದೇವಾಲಯಗಳಲ್ಲಿ ಪೂಜೆ ಮಾಡುವಾಗ ಶ್ಲೋಕಗಳನ್ನು ಸಂಸ್ಕೃತದಲ್ಲಿ ಹೇಳುತ್ತಿದ್ದಾರೆ. ತಮಿಳುನಾಡು ರಾಜ್ಯದಲ್ಲಿ ತಮಿಳಿನಲ್ಲಿ ಶ್ಲೋಕ ಹೇಳುತ್ತಾರೆ. ಅದೇ ರೀತಿ ಕರ್ನಾಟಕದ ದೇವಾಲಯಗಳಲ್ಲೂ ಕನ್ನಡದಲ್ಲಿ ಶ್ಲೋಕ ಹೇಳುವಂತೆ ಕ್ರಮ ಆಗಬೇಕು. ಹಿರೇಮಗಳೂರು ಕಣ್ಣನ್ ಅವರು ಕನ್ನಡದಲ್ಲಿ ಶ್ಲೋಕ ಹೇಳ್ತಾರೆ. ಅದರಂತೆ ಕನ್ನಡದಲ್ಲಿ ಶ್ಲೋಕ ಹೇಳುವಂತೆ ಕ್ರಮ ಆಗಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ, ಆಗಮ ಶಿಕ್ಷಣದಲ್ಲಿ ಅನೇಕ ವರ್ಷಗಳಿಂದ ಸರ್ಟಿಫಿಕೇಟ್ ಕೊಟ್ಟಿರಲಿಲ್ಲ. ಈಗ ನಾವು ಕೊಡ್ತಿದ್ದೇವೆ. ಕನ್ನಡದಲ್ಲಿ ಶ್ಲೋಕ ಅಭ್ಯಾಸ ಮಾಡಲು ಸೂಚನೆ ಕೊಡ್ತೀವಿ ಎಂದರು. ಇನ್ನು ದೇವಾಲಯಗಳಲ್ಲಿ ಆ.15ರಿಂದ ಪ್ಲಾಸ್ಟಿಕ್ ನಿಷೇಧ ಮಾಡಲಾಗುತ್ತಿದೆ. ದೇವಾಲಯಗಳಲ್ಲಿ ಪ್ಲಾಸ್ಟಿಕ್ ನಿಷೇಧದ ಜೊತೆಗೆ ಸ್ವಚ್ಛತೆಗೂ ಸೂಚನೆ ಕೊಡ್ತೀವಿ ಎಂದು ಸ್ಪಷ್ಟಪಡಿಸಿದರು.