AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ

ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ

ಝಾಹಿರ್ ಯೂಸುಫ್
|

Updated on: Jan 11, 2026 | 12:08 PM

Share

Brisbane Heat vs Sydney Thunder: ದಿ ಗಬ್ಬಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ಹಾಗೂ ಸಿಡ್ನಿ ಥಂಡರ್ ತಂಡಗಳು ಕಣಕ್ಕಿಳಿದಿದ್ದವು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 180 ರನ್​ಗಳು. ಈ ಕಠಿಣ ಗುರಿ ಬೆನ್ನತ್ತಿದ ಬ್ರಿಸ್ಬೇನ್ ಹೀಟ್ ತಂಡದಕ್ಕೆ ಉಸ್ಮಾನ್ ಖ್ವಾಜಾ ಅತ್ಯುತ್ತಮ ಆರಂಭ ಒದಗಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಖ್ವಾಜಾ ಸಿಡ್ನಿ ಥಂಡರ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದರು.

ಕೆಲ ದಿನಗಳ ಹಿಂದೆಯಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದ ಆಸ್ಟ್ರೇಲಿಯಾ ಆಟಗಾರ ಉಸ್ಮಾನ್ ಖ್ವಾಜಾ ಇದೀಗ ಬಿಗ್ ಬ್ಯಾಷ್ ಲೀಗ್​ನಲ್ಲಿ ಕಣಕ್ಕಿಳಿದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಬಳಿಕ ನೇರವಾಗಿ ಟಿ20 ಪಂದ್ಯದಲ್ಲಿ ಕಣಕ್ಕಿಳಿದ ಖ್ವಾಜಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

ದಿ ಗಬ್ಬಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ಹಾಗೂ ಸಿಡ್ನಿ ಥಂಡರ್ ತಂಡಗಳು ಕಣಕ್ಕಿಳಿದಿದ್ದವು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 180 ರನ್​ಗಳು.

ಈ ಕಠಿಣ ಗುರಿ ಬೆನ್ನತ್ತಿದ ಬ್ರಿಸ್ಬೇನ್ ಹೀಟ್ ತಂಡದಕ್ಕೆ ಉಸ್ಮಾನ್ ಖ್ವಾಜಾ ಅತ್ಯುತ್ತಮ ಆರಂಭ ಒದಗಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಖ್ವಾಜಾ ಸಿಡ್ನಿ ಥಂಡರ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದರು.

ಪರಿಣಾಮ ಉಸ್ಮಾನ್ ಖ್ವಾಜಾ ಬ್ಯಾಟ್​ನಿಂದ 3 ಸಿಕ್ಸರ್ ಹಾಗೂ 7 ಫೋರ್​ಗಳನ್ನು ಒಳಗೊಂಡಂತೆ ಕೇವಲ 48 ಎಸೆತಗಳಲ್ಲಿ 78 ರನ್​ಗಳು ಮೂಡಿಬಂದವು. ಈ ಅರ್ಧಶತಕ ನೆರವಿನೊಂದಿಗೆ ಬ್ರಿಸ್ಬೇನ್ ಹೀಟ್ ತಂಡವು 16.2 ಓವರ್​ಗಳಲ್ಲಿ 183 ರನ್ ಬಾರಿಸುವ ಮೂಲಕ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.