ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
Brisbane Heat vs Sydney Thunder: ದಿ ಗಬ್ಬಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ಹಾಗೂ ಸಿಡ್ನಿ ಥಂಡರ್ ತಂಡಗಳು ಕಣಕ್ಕಿಳಿದಿದ್ದವು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ತಂಡವು 20 ಓವರ್ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 180 ರನ್ಗಳು. ಈ ಕಠಿಣ ಗುರಿ ಬೆನ್ನತ್ತಿದ ಬ್ರಿಸ್ಬೇನ್ ಹೀಟ್ ತಂಡದಕ್ಕೆ ಉಸ್ಮಾನ್ ಖ್ವಾಜಾ ಅತ್ಯುತ್ತಮ ಆರಂಭ ಒದಗಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಖ್ವಾಜಾ ಸಿಡ್ನಿ ಥಂಡರ್ ಬೌಲರ್ಗಳನ್ನು ಮನಸೋ ಇಚ್ಛೆ ದಂಡಿಸಿದರು.
ಕೆಲ ದಿನಗಳ ಹಿಂದೆಯಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದ ಆಸ್ಟ್ರೇಲಿಯಾ ಆಟಗಾರ ಉಸ್ಮಾನ್ ಖ್ವಾಜಾ ಇದೀಗ ಬಿಗ್ ಬ್ಯಾಷ್ ಲೀಗ್ನಲ್ಲಿ ಕಣಕ್ಕಿಳಿದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಬಳಿಕ ನೇರವಾಗಿ ಟಿ20 ಪಂದ್ಯದಲ್ಲಿ ಕಣಕ್ಕಿಳಿದ ಖ್ವಾಜಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.
ದಿ ಗಬ್ಬಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ಹಾಗೂ ಸಿಡ್ನಿ ಥಂಡರ್ ತಂಡಗಳು ಕಣಕ್ಕಿಳಿದಿದ್ದವು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ತಂಡವು 20 ಓವರ್ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 180 ರನ್ಗಳು.
ಈ ಕಠಿಣ ಗುರಿ ಬೆನ್ನತ್ತಿದ ಬ್ರಿಸ್ಬೇನ್ ಹೀಟ್ ತಂಡದಕ್ಕೆ ಉಸ್ಮಾನ್ ಖ್ವಾಜಾ ಅತ್ಯುತ್ತಮ ಆರಂಭ ಒದಗಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಖ್ವಾಜಾ ಸಿಡ್ನಿ ಥಂಡರ್ ಬೌಲರ್ಗಳನ್ನು ಮನಸೋ ಇಚ್ಛೆ ದಂಡಿಸಿದರು.
ಪರಿಣಾಮ ಉಸ್ಮಾನ್ ಖ್ವಾಜಾ ಬ್ಯಾಟ್ನಿಂದ 3 ಸಿಕ್ಸರ್ ಹಾಗೂ 7 ಫೋರ್ಗಳನ್ನು ಒಳಗೊಂಡಂತೆ ಕೇವಲ 48 ಎಸೆತಗಳಲ್ಲಿ 78 ರನ್ಗಳು ಮೂಡಿಬಂದವು. ಈ ಅರ್ಧಶತಕ ನೆರವಿನೊಂದಿಗೆ ಬ್ರಿಸ್ಬೇನ್ ಹೀಟ್ ತಂಡವು 16.2 ಓವರ್ಗಳಲ್ಲಿ 183 ರನ್ ಬಾರಿಸುವ ಮೂಲಕ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
