ಅಪರೂಪಕ್ಕೆ ಸಿಟ್ಟಿಗೆದ್ದ ಸಚಿವ ರಾಮಲಿಂಗಾರೆಡ್ಡಿ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕೆಂಡ ಕಾರಿದರು!
ರಾಜ್ಯದ ರೈತರು ಮತ್ತು ಜನರ ಬಗ್ಗೆ ಅವರಿಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ ತಮ್ಮೊಂದಿಗೆ ಕೈ ಜೋಡಿಸುತ್ತಿದ್ದರು. ಅದರೆ, ರಾಜ್ಯ ಸರ್ಕಾರಕ್ಕೆ ಅನುದಾನ ಸಿಗದಿರುವುದು ಕಂಡು ಅವರು ವಿಕೃತಾನಂದ ಅನುಭವಿಸುತ್ತಿದ್ದಾರೆ. ರಾಜ್ಯ ಬಿಜೆಪಿ ನಾಯಕರು ವಿಘ್ನ ಸಂತೋಷಿಗಳು, ರಾಜ್ಯದಲ್ಲಿ ಅವರು ಸರ್ಕಾರ ನಡೆಸುತ್ತಿದ್ದಾಗ, ಅವರಪ್ಪನ ಮನೆಯಿಂದ ಹಣ ತರುತ್ತಿದ್ದರೇ ಎಂದು ರೆಡ್ಡಿ ಉಗ್ರರಾಗಿ ಪ್ರಶ್ನಿಸಿದರು.
ಬೆಂಗಳೂರು: ಸಾಮಾನ್ಯವಾಗಿ ಮಾಧ್ಯಮಗಳ ಜೊತೆ ಮಾತಾಡುವಾಗ ತಾಳ್ಮೆ ಕಳೆದುಕೊಳ್ಳದೆ ಸಂಯಮದಿಂದ ಮಾತಾಡುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಇವತ್ತು ದೆಹಲಿಗೆ ತೆರಳಲು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ (KIA) ಬಂದಾಗ ಮಾಧ್ಯಮಗಳ ಮುಂದೆ ಬೆಂಕಿಯುಗುಳಿದರು. ಕಾಂಗ್ರೆಸ್ ಸರ್ಕಾರ ನಾಳೆ ದೆಹಲಿಯಲ್ಲಿ ಅನುದಾನ ಹಂಚಿಕೆ ವಿಷಯದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಡೆಸಲಿರುವ ಪ್ರತಿಭಟನೆ ವಿರುದ್ಧ ಟೀಕೆ ಮಾಡುತ್ತಿರುವ ರಾಜ್ಯ ಬಿಜೆಪಿ ನಾಯಕರಿಗೆ ಮಾನ ಮರ್ಯಾದೆ ಇಲ್ಲ, ತಮ್ಮ ಧರಣಿಯನ್ನು ಪ್ರಶ್ನಿಸುವ ಅವರಿಗೆ ನಾಚಿಕೆಯಾಗಬೇಕು ಎಂದು ಗುಡುಗಿದರು. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಇವರಿಗೆ ಕಾಣುತ್ತಿಲ್ಲವೇ? 236 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳು ಬರಪೀಡಿತ ಅಂತ ಘೋಷಿಸಲಾಗಿದೆ. ಕರ್ನಾಟಕದಿಂದ 4.5 ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹದ ಹಣ ಹೋಗುತ್ತದೆ. ಆದರೆ ರಾಜ್ಯಕ್ಕೆ ಸಿಗುತ್ತಿರುವ ಅನುದಾನ ತೀರ ಕಡಿಮೆ ಅನ್ನೋದು ಬಿಜೆಪಿಯವರಿಗೆ ಗೊತ್ತಿಲ್ಲವೇ? ಎಂದು ರೆಡ್ಡಿ ಕೇಳಿದರು.
ರಾಜ್ಯದ ರೈತರು ಮತ್ತು ಜನರ ಬಗ್ಗೆ ಅವರಿಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ ತಮ್ಮೊಂದಿಗೆ ಕೈ ಜೋಡಿಸುತ್ತಿದ್ದರು. ಅದರೆ, ರಾಜ್ಯ ಸರ್ಕಾರಕ್ಕೆ ಅನುದಾನ ಸಿಗದಿರುವುದು ಕಂಡು ಅವರು ವಿಕೃತಾನಂದ ಅನುಭವಿಸುತ್ತಿದ್ದಾರೆ. ರಾಜ್ಯ ಬಿಜೆಪಿ ನಾಯಕರು ವಿಘ್ನ ಸಂತೋಷಿಗಳು, ರಾಜ್ಯದಲ್ಲಿ ಅವರು ಸರ್ಕಾರ ನಡೆಸುತ್ತಿದ್ದಾಗ, ಅವರಪ್ಪನ ಮನೆಯಿಂದ ಹಣ ತರುತ್ತಿದ್ದರೇ ಎಂದು ರೆಡ್ಡಿ ಉಗ್ರರಾಗಿ ಪ್ರಶ್ನಿಸಿದರು. ಖಜಾನೆಯಲ್ಲಿ ಹಣವಿದೆಯೋ ಇಲ್ಲವೋ ಅನ್ನೋದು ಪ್ರಶ್ನೆಯಲ್ಲ, ಇಲ್ಲಿ ಪ್ರಶ್ನೆಯಿರೋದು ನಮ್ಮ ಪಾಲು ನಮಗೆ ಬರಬೇಕು ಎಂದು ಅವರು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

