ನೆಲಮಂಗಲದಲ್ಲಿ ಕ್ಷೇಮವನ ಪ್ರಕೃತಿ ಚಿಕಿತ್ಸಾ ಕೇಂದ್ರ ಉದ್ಘಾಟಿಸಲು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಆಗಮಿಸಿದರು

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Sep 01, 2022 | 1:45 PM

ಉದ್ಘಾಟನಾ ಸಮಾರಂಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಇನ್ನೂ ಹಲವಾರು ಗಣ್ಯರು ಭಾಗವಹಿಸಿದ್ದಾರೆ.

ನೆಲಮಂಗಲದಲ್ಲಿ ಧರ್ಮಸ್ಥಳ ಶಿಕ್ಷಣ ಸಂಸ್ಥೆ ನಿರ್ಮಿಸಿರುವ ಪ್ರಕೃತಿ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ಹೆಲಿಕಾಪ್ಟರ್ ನಲ್ಲಿ ಆಗಮಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ (Dr Veerendra Heggade), ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ಇನ್ನೂ ಹಲವಾರು ಗಣ್ಯರು ಭಾಗವಹಿಸಿದ್ದಾರೆ. ಹೆಲಿಪ್ಯಾಡ್ ಬಳಿ ಸಚಿವ ಬೈರತಿ ಬಸವರಾಜ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡರು.

Published on: Sep 01, 2022 01:45 PM