AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಶಿನಗರದಲ್ಲಿ ಪ್ರವಾಹದ ಸ್ಥಳಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ಭೇಟಿ; ನಾರಾಯಣಿ ನದಿ ಹೂಳೆತ್ತಲು ಆದೇಶ

ಕುಶಿನಗರದಲ್ಲಿ ಪ್ರವಾಹದ ಸ್ಥಳಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ಭೇಟಿ; ನಾರಾಯಣಿ ನದಿ ಹೂಳೆತ್ತಲು ಆದೇಶ

ಸುಷ್ಮಾ ಚಕ್ರೆ
|

Updated on: Sep 29, 2026 | 10:32 PM

Share

ನೇಪಾಳದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಗಂಡಕ್-ನಾರಾಯಣಿ ನದಿ ವ್ಯವಸ್ಥೆಯಲ್ಲಿ ನೀರಿನ ಮಟ್ಟ ದಿಢೀರ್ ಏರಿಕೆಯಾಗಿದೆ. ಜಲಾಶಯಗಳಿಂದ ಹೆಚ್ಚಿನ ನೀರು ಹೊರಬಿಟ್ಟಿದ್ದರಿಂದ ಉತ್ತರ ಪ್ರದೇಶ ಮತ್ತು ಬಿಹಾರದ ಗಡಿ ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ತಮ್ಮ ಭೇಟಿಯ ಸಮಯದಲ್ಲಿ ಸಿಎಂ ಯೋಗಿ ಆದಿತ್ಯನಾಥ್, ನಾರಾಯಣಿ ನದಿಯ ನೀರು ಶೇಖರಣಾ ಸಾಮರ್ಥ್ಯವನ್ನು ಹೆಚ್ಚಿಸಲು ಹಾಗೂ ಪದೇ ಪದೇ ಎದುರಾಗುವ ಪ್ರವಾಹ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕುಶಿನಗರದಲ್ಲಿ ನಾರಾಯಣಿ ನದಿಯ ಹೂಳೆತ್ತುವಿಕೆ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದು ಎಂದು ಘೋಷಿಸಿದರು.

ಕುಶಿನಗರ, ಸೆಪ್ಟೆಂಬರ್ 29: ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ ನಾರಾಯಣಿ ನದಿಯ ಒಡ್ಡು ಕುಸಿದು, 3 ಡಜನ್‌ಗೂ ಹೆಚ್ಚು ಹಳ್ಳಿಗಳು ಜಲಾವೃತಗೊಂಡಿದೆ. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಯ ಪರಿಶೀಲನೆ ನಡೆಸಿದರು. ಒಡ್ಡು ಒಡೆದ ಪರಿಣಾಮ 6 ಹಳ್ಳಿಗಳ ಸುಮಾರು 20,000ಕ್ಕೂ ಹೆಚ್ಚು ಜನರು ಪ್ರವಾಹಕ್ಕೆ ಸಿಲುಕಿದ್ದು, ಹಾನಿಯ ನಿಖರ ಪ್ರಮಾಣವನ್ನು ಅಧಿಕಾರಿಗಳು ಇನ್ನು ಅಂದಾಜು ಮಾಡುತ್ತಿದ್ದಾರೆ.

ನೇಪಾಳದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಗಂಡಕ್-ನಾರಾಯಣಿ ನದಿ ವ್ಯವಸ್ಥೆಯಲ್ಲಿ ನೀರಿನ ಮಟ್ಟ ದಿಢೀರ್ ಏರಿಕೆಯಾಗಿದೆ. ಜಲಾಶಯಗಳಿಂದ ಹೆಚ್ಚಿನ ನೀರು ಹೊರಬಿಟ್ಟಿದ್ದರಿಂದ ಉತ್ತರ ಪ್ರದೇಶ ಮತ್ತು ಬಿಹಾರದ ಗಡಿ ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ತಮ್ಮ ಭೇಟಿಯ ಸಮಯದಲ್ಲಿ ಸಿಎಂ ಯೋಗಿ ಆದಿತ್ಯನಾಥ್, ನಾರಾಯಣಿ ನದಿಯ ನೀರು ಶೇಖರಣಾ ಸಾಮರ್ಥ್ಯವನ್ನು ಹೆಚ್ಚಿಸಲು ಹಾಗೂ ಪದೇ ಪದೇ ಎದುರಾಗುವ ಪ್ರವಾಹ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕುಶಿನಗರದಲ್ಲಿ ನಾರಾಯಣಿ ನದಿಯ ಹೂಳೆತ್ತುವಿಕೆ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದು ಎಂದು ಘೋಷಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More