ಶಾಂತಿ ಕದಡಿದರೆ ತಕ್ಕ ಶಿಕ್ಷೆ; ಐ ಲವ್ ಮುಹಮ್ಮದ್ ವಿವಾದದ ನಡುವೆ ಸಿಎಂ ಯೋಗಿ ಖಡಕ್ ಎಚ್ಚರಿಕೆ

Updated on: Sep 27, 2025 | 8:25 PM

ಶ್ರಾವಸ್ತಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಅರಾಜಕತೆಯನ್ನು ಒಪ್ಪಲು ಸಾಧ್ಯವಿಲ್ಲ. ನಮ್ಮ ಅವರ ಸರ್ಕಾರ ಎಲ್ಲರಿಗೂ ಭದ್ರತೆಯನ್ನು ಒದಗಿಸುತ್ತದೆ. ಆದರೆ ಯಾರಾದರೂ ಮುಗ್ಧ ಜನರ ಮೇಲೆ ದಾಳಿ ಮಾಡಲು ಪ್ರಯತ್ನಿಸಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಅದು ಭವಿಷ್ಯದ ಪೀಳಿಗೆಗೆ ಒಂದು ಉದಾಹರಣೆಯಾಗುತ್ತದೆ ಎಂದಿದ್ದಾರೆ.

ಶ್ರಾವಸ್ತಿ, ಸೆಪ್ಟೆಂಬರ್ 27: ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳುಮಾಡಲು ಯೋಜಿಸುವ ಎಲ್ಲರಿಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಕಠಿಣ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಶಾಂತಿ ಕಾಪಾಡಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ‘ಐ ಲವ್ ಮುಹಮ್ಮದ್’ ವಿವಾದದ ಹಿನ್ನೆಲೆಯಲ್ಲಿ ಬರೇಲಿಯಲ್ಲಿ ನಡೆದ ಹಿಂಸಾಚಾರದ ನಡುವೆ ಯೋಗಿ ಆದಿತ್ಯನಾಥ್ ಅವರ ಹೇಳಿಕೆಗಳು ಬಂದಿವೆ.

ಶ್ರಾವಸ್ತಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ನಮ್ಮ ರಾಜ್ಯದಲ್ಲಿ ಅರಾಜಕತೆಯನ್ನು ಒಪ್ಪಲು ಸಾಧ್ಯವಿಲ್ಲ. ನಮ್ಮ ಸರ್ಕಾರ ಎಲ್ಲರಿಗೂ ಭದ್ರತೆಯನ್ನು ಒದಗಿಸುತ್ತದೆ, ಆದರೆ ಯಾರಾದರೂ ಮುಗ್ಧ ಜನರ ಮೇಲೆ ದಾಳಿ ಮಾಡಲು ಪ್ರಯತ್ನಿಸಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಹಬ್ಬಗಳ ಸಮಯದಲ್ಲಿ ಯಾರಾದರೂ ವಾತಾವರಣವನ್ನು ಹಾಳುಮಾಡಲು ಪ್ರಯತ್ನಿಸಿದರೆ, ಸರ್ಕಾರ ಅದನ್ನು ಒಪ್ಪುವುದಿಲ್ಲ. ನಾನು ಮತ್ತೊಮ್ಮೆ ಹೇಳುತ್ತೇನೆ, ಯಾರಾದರೂ ಬೀದಿಗಳಲ್ಲಿ ಪ್ರತಿಭಟನೆ ನಡೆಸುವ ಮೂಲಕ ಗೊಂದಲವನ್ನು ಉಂಟುಮಾಡಲು ಧೈರ್ಯ ಮಾಡಿದರೆ ಅವರು ಅದಕ್ಕೆ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ