ಉತ್ತರ ಪ್ರದೇಶದಲ್ಲಿ ಗಾಳಿ ಮಳೆ ಅಬ್ಬರ: ಉನ್ನಾವ್​ನಲ್ಲಿ ವರುಣಾರ್ಭಟದ ರೌದ್ರ ನರ್ತನ ಹೇಗಿತ್ತು ನೋಡಿ!

Updated on: May 14, 2026 | 7:51 AM

ಉತ್ತರ ಪ್ರದೇಶದ ಹಲವು ಕಡೆಗಳಲ್ಲಿ ಬುಧವಾರ ಬೀಸಿದ ಬಿರುಗಾಳಿ, ಮಳೆ ಮತ್ತು ಆಲಿಕಲ್ಲು ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಉನ್ನಾವ್ ಜಿಲ್ಲೆಯಲ್ಲಿ ಭಾರೀ ಬಿರುಗಾಳಿ ಮತ್ತು ಮಳೆಯ ಸಮಯದಲ್ಲಿ ಸಂಭವಿಸಿದ ಪ್ರತ್ಯೇಕ ಘಟನೆಗಳಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಗಾಳಿ-ಮಳೆಯ ರೌದ್ರ ನರ್ತನದ ವಿಡಿಯೋ ಇಲ್ಲಿದೆ ನೋಡಿ.

ಲಖನೌ, ಮೇ 14: ಉತ್ತರ ಪ್ರದೇಶದ ಉನ್ನಾವ್ ಜಿಲ್ಲೆಯಲ್ಲಿ ಬುಧವಾರ ಭಾರೀ ಬಿರುಗಾಳಿ ಮತ್ತು ಮಳೆ ಸುರಿದಿದ್ದು, ಪ್ರತ್ಯೇಕ ಘಟನೆಗಳಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ದಹಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾವಿನ ಮರ ಬಿದ್ದು 70 ವರ್ಷದ ರೈತರೊಬ್ಬರು ಸಾವನ್ನಪ್ಪಿದ್ದಾರೆ. ಅಸಿವಾನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೀಲಗಿರಿ ಮರ ಬಿದ್ದು ಒಂಬತ್ತು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಲಕ್ನೋ ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟಾರೆಯಾಗಿ ರಾಜ್ಯದಾದ್ಯಂತ ಮಳೆಗೆ 74 ಮಂದಿ ಮೃತಪಟ್ಟಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More