Video: ಪ್ರಯಾಗ್​ರಾಜ್​ಗೆ ಹೊರಟಿದ್ದ ರೈಲಿನ ಮೇಲೆ ಕಲ್ಲು ತೂರಾಟ, ರೈಲು ಧ್ವಂಸ

Updated on: Jan 28, 2025 | 2:33 PM

ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಝಾನ್ಸಿ ಜಿಲ್ಲೆಯಲ್ಲಿ ನಡೆದಿದೆ. ಗುಂಪೊಂದು ರೈಲಿನ ಮೇಲೆ ದಾಳಿ ಮಾಡಿತು. ದಾಳಿಯ ವೇಳೆ ರೈಲು ನಿಲ್ದಾಣದಲ್ಲಿ ನಿಂತಿತ್ತು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಮಹಾಕುಂಭದ ನಿಮಿತ್ತ ಪ್ರಯಾಗ್​ರಾಜ್‌ಗೆ ತೆರಳುವ ಪ್ರತಿ ರೈಲಿನಲ್ಲಿ ಭಾರಿ ಜನಸಂದಣಿ ಕಂಡುಬರುತ್ತಿರುವುದು ಗಮನಾರ್ಹವಾಗಿದೆ.

ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಝಾನ್ಸಿ ಜಿಲ್ಲೆಯಲ್ಲಿ ನಡೆದಿದೆ. ಗುಂಪೊಂದು ರೈಲಿನ ಮೇಲೆ ದಾಳಿ ಮಾಡಿತು. ದಾಳಿಯ ವೇಳೆ ರೈಲು ನಿಲ್ದಾಣದಲ್ಲಿ ನಿಂತಿತ್ತು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಮಹಾಕುಂಭದ ನಿಮಿತ್ತ ಪ್ರಯಾಗ್​ರಾಜ್‌ಗೆ ತೆರಳುವ ಪ್ರತಿ ರೈಲಿನಲ್ಲಿ ಭಾರಿ ಜನಸಂದಣಿ ಕಂಡುಬರುತ್ತಿರುವುದು ಗಮನಾರ್ಹವಾಗಿದೆ. ದಾಳಿಕೋರರು ಕಲ್ಲು ತೂರಾಟ ನಡೆಸಿದ್ದಲ್ಲದೆ ರೈಲು ಧ್ವಂಸಗೊಳಿಸಿದ್ದಾರೆ. ರೈಲಿನೊಳಗೆ ಕುಳಿತಿದ್ದ ಜನರು ಭಯಭೀತರಾಗುವ ರೀತಿಯಲ್ಲಿ ಹೊರಗೆ ನಿಂತಿದ್ದ ಜನರು ದಾಳಿ ನಡೆಸಿದರು. ಘಟನೆಯ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ನಾಳೆ ಮೌನಿ ಅಮವಾಸ್ಯೆಯ ಕಾರಣ, ವಿವಿಧ ಸ್ಥಳಗಳಿಂದ ಲಕ್ಷಾಂತರ ಭಕ್ತರು ಪ್ರಯಾಗರಾಜ್‌ಗೆ ಆಗಮಿಸುತ್ತಿದ್ದಾರೆ. ಝಾನ್ಸಿ ವಿಭಾಗದ ಹರ್ಪಾಲ್‌ಪುರ ನಿಲ್ದಾಣದಲ್ಲಿ ರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಗುಂಪು ಏಕಾಏಕಿ ದಾಳಿ ನಡೆಸಿತ್ತು. ಜನರು ರೈಲಿನೊಳಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದರು.

ಅದು ಸಾಧ್ಯವಾಗದಿದ್ದಾಗ ಕಿಟಕಿಗಳು, ಬಾಗಿಲುಗಳನ್ನು ಒಡೆದಿದ್ದಾರೆ. ಈ ಘಟನೆಯ ನಂತರ ಸ್ಥಳೀಯ ಪೊಲೀಸರು ಮತ್ತು ರೈಲ್ವೆ ಭದ್ರತಾ ಪಡೆಗಳನ್ನು ತಕ್ಷಣವೇ ಸ್ಥಳಕ್ಕೆ ಕರೆಸಲಾಯಿತು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ರೈಲ್ವೆ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ. ಎಲ್ಲಾ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jan 28, 2025 12:36 PM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More