Video: ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಕಾರು, 11 ಮಂದಿ ಸಾವು

Updated on: Aug 03, 2025 | 12:30 PM

ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಉರುಳಿದ ಪರಿಣಾಮ 11 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ. ಭಾನುವಾರ 15 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬೊಲೆರೊ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಹನ್ನೊಂದು ಜನರು ಸಾವನ್ನಪ್ಪಿದ್ದಾರೆ. ಪೊಲೀಸರ ಪ್ರಕಾರ, ಪ್ರಯಾಣಿಕರು ದೇವಸ್ಥಾನಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಮೃತರ ವಿವರಗಳು ಮತ್ತು ಗುರುತುಗಳನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ.

ಉತ್ತರ ಪ್ರದೇಶ, ಆಗಸ್ಟ್ 03: ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಉರುಳಿದ ಪರಿಣಾಮ 11 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ. ಭಾನುವಾರ 15 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬೊಲೆರೊ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಹನ್ನೊಂದು ಜನರು ಸಾವನ್ನಪ್ಪಿದ್ದಾರೆ.
ಪೊಲೀಸರ ಪ್ರಕಾರ, ಪ್ರಯಾಣಿಕರು ದೇವಸ್ಥಾನಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಮೃತರ ವಿವರಗಳು ಮತ್ತು ಗುರುತುಗಳನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ. ಘಟನೆಯನ್ನು ಗಮನಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲು ಮತ್ತು ಅವರಿಗೆ ಸರಿಯಾದ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಲು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More