Video: ಉತ್ತರ ಪ್ರದೇಶದಲ್ಲಿ ರೈಲ್ವೆ ಹಳಿಯ ಮೇಲೆ ಉರುಳಿ ಬಿದ್ದ ಟ್ರಕ್, ಸ್ವಲ್ಪದರಲ್ಲೇ ತಪ್ಪಿದ ಅನಾಹುತ
ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಡಂಪರ್ ಟ್ರಕ್ ನಿಯಂತ್ರಣ ತಪ್ಪಿ ರೈಲ್ವೆ ಹಳಿಯ ಮೇಲೆ ಉರುಳಿ ಬಿದ್ದಿರುವ ಘಟನೆ ವರದಿಯಾಗಿದೆ. ರಾಮನಗರ ಪೊಲೀಸ್ ಠಾಣೆ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿದ್ದು, ಅಮೃತಸರದಿಂದ ಬಿಹಾರಕ್ಕೆ ಪ್ರಯಾಣಿಸುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್ ಪಕ್ಕದ ಹಳಿಯಲ್ಲಿ ಹಾದು ಹೋಗುವಾಗ ಈ ಘಟನೆ ಸಂಭವಿಸಿತ್ತು. ಫ್ಲೈವುಡ್ಗಳನ್ನು ತುಂಬಿದ್ದ ಟ್ರಕ್ ಅದಾಗಿತ್ತು. ಅಪಘಾತದ ಸಮಯದಲ್ಲೇ ಗರೀಬ್ ರಥ ಎಕ್ಸ್‌ಪ್ರೆಸ್ ಪಕ್ಕದ ಹಳಿ ಮೇಲೆ ಹೋಗಿದೆ. ಕೂಡಲೇ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು
ಬಾರಾಬಂಕಿ, ನವೆಂಬರ್ 27: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಡಂಪರ್ ಟ್ರಕ್ ನಿಯಂತ್ರಣ ತಪ್ಪಿ ರೈಲ್ವೆ ಹಳಿಯ ಮೇಲೆ ಉರುಳಿ ಬಿದ್ದಿರುವ ಘಟನೆ ವರದಿಯಾಗಿದೆ. ರಾಮನಗರ ಪೊಲೀಸ್ ಠಾಣೆ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿದ್ದು, ಅಮೃತಸರದಿಂದ ಬಿಹಾರಕ್ಕೆ ಪ್ರಯಾಣಿಸುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್ ಪಕ್ಕದ ಹಳಿಯಲ್ಲಿ ಹಾದು ಹೋಗುವಾಗ ಈ ಘಟನೆ ಸಂಭವಿಸಿತ್ತು. ಫ್ಲೈವುಡ್ಗಳನ್ನು ತುಂಬಿದ್ದ ಟ್ರಕ್ ಅದಾಗಿತ್ತು. ಅಪಘಾತದ ಸಮಯದಲ್ಲೇ ಗರೀಬ್ ರಥ ಎಕ್ಸ್‌ಪ್ರೆಸ್ ಪಕ್ಕದ ಹಳಿ ಮೇಲೆ ಹೋಗಿದೆ. ಕೂಡಲೇ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.
ರೈಲ್ವೆ ಎಂಜಿನಿಯರ್‌ಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಅವಶೇಷಗಳನ್ನು ತೆರವುಗೊಳಿಸಲು ಮತ್ತು ಹಾನಿಗೊಳಗಾದ ವಿದ್ಯುತ್ ಮೂಲಸೌಕರ್ಯವನ್ನು ಸರಿಪಡಿಸಲು ಪುನಃಸ್ಥಾಪನೆ ಕಾರ್ಯವನ್ನು ಪ್ರಾರಂಭಿಸಿದರು.ನಜ್ಜುಗುಜ್ಜಾದ ಕ್ಯಾಬಿನ್ ಒಳಗೆ ಸಿಲುಕಿದ್ದ ಟ್ರಕ್ ಚಾಲಕನನ್ನು ಪೊಲೀಸರು, ರೈಲ್ವೆ ಸಿಬ್ಬಂದಿ ಮತ್ತು ವಿಪತ್ತು ನಿರ್ವಹಣಾ ಘಟಕಗಳ ಜಂಟಿ ತಂಡ ರಕ್ಷಿಸಿ, ಪ್ರಥಮ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಯಿತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ