Video: ಟೋಲ್​ನಲ್ಲಿ ಕಾರುಗಳಿಗೆ ಡಿಕ್ಕಿ ಹೊಡೆದು, ಸಿಬ್ಬಂದಿಯನ್ನು 50 ಮೀಟರ್ ಎಳೆದೊಯ್ದ ಟ್ರಕ್

Updated on: Jan 18, 2026 | 3:16 PM

ಉತ್ತರ ಪ್ರದೇಶದ ಝಾನ್ಸಿಯಲ್ಲಿ ಟೋಲ್ ಪ್ಲಾಜಾದಲ್ಲಿ ಕಾಯುತ್ತಿದ್ದ ಎರಡು ಕಾರುಗಳಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಟೋಲ್ ಸಿಬ್ಬಂದಿ ಮತ್ತು ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮಾತ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾನ್ಪುರ ಹೆದ್ದಾರಿಯಲ್ಲಿರುವ ಸೆಮ್ರಿ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದ್ದು, ಪ್ಲಾಜಾದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಫಾಸ್ಟ್​ ಟ್ಯಾಗ್ ವರ್ಕ್​ ಆಗಲಿಲ್ಲ ಎಂದು ಎರಡು ಕಾರುಗಳು ಟೋಲ್​ನಲ್ಲೇ ನಿಂತಿದ್ದವು, ಟೋಲ್ ಸಿಬ್ಬಂದಿ ಟ್ಯಾಗ್​ ಸ್ಕ್ಯಾನ್ ಮಾಡುತ್ತಿದ್ದಾಗ ಹಿಂದಿನಿಂದ ಅತಿ ವೇಗದಲ್ಲಿ ಬಂದ ಟ್ರಕ್ ನಿಂತಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ.

ಝಾನ್ಸಿ, ಜನವರಿ 18: ಉತ್ತರ ಪ್ರದೇಶದ ಝಾನ್ಸಿಯಲ್ಲಿ ಟೋಲ್ ಪ್ಲಾಜಾದಲ್ಲಿ ಕಾಯುತ್ತಿದ್ದ ಎರಡು ಕಾರುಗಳಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಟೋಲ್ ಸಿಬ್ಬಂದಿ ಮತ್ತು ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮಾತ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾನ್ಪುರ ಹೆದ್ದಾರಿಯಲ್ಲಿರುವ ಸೆಮ್ರಿ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದ್ದು, ಪ್ಲಾಜಾದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಫಾಸ್ಟ್​ ಟ್ಯಾಗ್ ವರ್ಕ್​ ಆಗಲಿಲ್ಲ ಎಂದು ಎರಡು ಕಾರುಗಳು ಟೋಲ್​ನಲ್ಲೇ ನಿಂತಿದ್ದವು, ಟೋಲ್ ಸಿಬ್ಬಂದಿ ಟ್ಯಾಗ್​ ಸ್ಕ್ಯಾನ್ ಮಾಡುತ್ತಿದ್ದಾಗ ಹಿಂದಿನಿಂದ ಅತಿ ವೇಗದಲ್ಲಿ ಬಂದ ಟ್ರಕ್ ನಿಂತಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More