Video: ಒಂದು ಚೂರೂ ಮನುಷ್ಯತ್ವ ಇಲ್ವಾ?, ಹೇಗೆ ಹೆಣ ಎಸೆದು ಹೋದ ನೋಡಿ ಆಂಬ್ಯುಲೆನ್ಸ್ ಚಾಲಕ
ಆಂಬ್ಯುಲೆನ್ಸ್ ಚಾಲಕನೊಬ್ಬ ವಾಹನದಿಂದ ಸ್ಟ್ರೆಚರ್ ಸಮೇತ ಹೆಣವನ್ನು ರಸ್ತೆಯಲ್ಲಿ ಎಸೆದು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಗೊಂಡಾದಲ್ಲಿ ನಡೆದಿದೆ. ಇನ್ನೂ ಆಘಾತಕಾರಿ ಸಂಗತಿಯೆಂದರೆ ಈ ಕೃತ್ಯ ಪೊಲೀಸರು ಮತ್ತು ಸ್ಥಳೀಯ ಜನರ ಎದುರೇ ನಡೆದಿದೆ. ಯಾವುದೋ ಗಲಾಟೆಯಲ್ಲಿ ಹೃದಯ್ಲಾಲ್ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿತ್ತು. ಅವರು ಗಂಭೀರವಾಗಿ ಗಾಯಗೊಂಡಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಹೃದಯ್ ಲಾಲ್ ಕೇವಲ ಎರಡು ತಿಂಗಳ ಹಿಂದೆ ವಿವಾಹವಾಗಿದ್ದರು ಎಂಬುದು ದುಃಖದ ಸಂಗತಿಯಾಗಿದೆ.
ಆಂಬ್ಯುಲೆನ್ಸ್ ಚಾಲಕನೊಬ್ಬ ವಾಹನದಿಂದ ಸ್ಟ್ರೆಚರ್ ಸಮೇತ ಹೆಣವನ್ನು ರಸ್ತೆಯಲ್ಲಿ ಎಸೆದು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಗೊಂಡಾದಲ್ಲಿ ನಡೆದಿದೆ. ಇನ್ನೂ ಆಘಾತಕಾರಿ ಸಂಗತಿಯೆಂದರೆ ಈ ಕೃತ್ಯ ಪೊಲೀಸರು ಮತ್ತು ಸ್ಥಳೀಯ ಜನರ ಎದುರೇ ನಡೆದಿದೆ. ಯಾವುದೋ ಗಲಾಟೆಯಲ್ಲಿ ಹೃದಯ್ಲಾಲ್ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿತ್ತು.
ಅವರು ಗಂಭೀರವಾಗಿ ಗಾಯಗೊಂಡಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಹೃದಯ್ ಲಾಲ್ ಕೇವಲ ಎರಡು ತಿಂಗಳ ಹಿಂದೆ ವಿವಾಹವಾಗಿದ್ದರು ಎಂಬುದು ದುಃಖದ ಸಂಗತಿಯಾಗಿದೆ. ಹೊಸ ಅಧ್ಯಾಯವನ್ನು ಆರಂಭಿಸಿದ್ದ ಕುಟುಂಬವೊಂದು ಇದ್ದಕ್ಕಿದ್ದಂತೆ ದುಃಖದಲ್ಲಿ ಮುಳುಗಿದೆ. ಅವರ ದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸುವ ಬದಲು ಆಂಬ್ಯುಲೆನ್ಸ್ ಚಾಲಕ ರಸ್ತೆಯಲ್ಲೇ ಎಸೆದು ಹೋಗಿರುವ ವಿಡಿಯೋ ವೈರಲ್ ಆಗಿದೆ.ಶವವನ್ನು ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Aug 07, 2025 02:57 PM