ಪ್ರಿಯಕರನ ಜೊತೆ ಸೇರಿ ನಡುರಸ್ತೆಯಲ್ಲೇ ಗಂಡನನ್ನು ಥಳಿಸಿದ ಹೆಂಡತಿ!

Updated on: Mar 02, 2025 | 8:03 PM

ಉತ್ತರ ಪ್ರದೇಶದ ಜಲೌನ್‌ನಲ್ಲಿ ಮಹಿಳೆ ಮತ್ತು ಆಕೆಯ ಗೆಳೆಯ ಸಾರ್ವಜನಿಕರ ಮುಂದೆ ಆ ಮಹಿಳೆಯ ಪತಿಯನ್ನು ಥಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಶನಿವಾರ ಸಂಜೆ ಉರೈ ಕೊಟ್ವಾಲಿ ಪ್ರದೇಶದ ಚುರ್ಖಿ ರಸ್ತೆಯಲ್ಲಿ ನಡೆದ ಈ ಘಟನೆಯನ್ನು ಅಲ್ಲೇ ಇದ್ದವರು ವಿಡಿಯೋದಲ್ಲಿ ಸೆರೆಹಿಡಿದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಜಗಳವನ್ನು ನಿಲ್ಲಿಸಲು ಮಧ್ಯಪ್ರವೇಶಿಸುವ ಬದಲು, ಕೆಲವು ಜನರು ಪತಿಯ ಮೇಲೆ ನಡೆದ ಹಲ್ಲೆಯಲ್ಲಿ ಸೇರಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಜಲೌನ್ (ಮಾರ್ಚ್ 2): ಉತ್ತರ ಪ್ರದೇಶದ ಜಲೌನ್‌ನ ಬೀದಿಯಲ್ಲಿ ತನ್ನ ಪ್ರಿಯಕರನ ಜೊತೆ ಸೇರಿ ಗಂಡನನ್ನು ಥಳಿಸುತ್ತಿರುವ ಮಹಿಳೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದರಲ್ಲಿ ಪತ್ನಿ ಮತ್ತು ಆಕೆಯ ಪ್ರಿಯಕರ ಸಾರ್ವಜನಿಕವಾಗಿಯೇ ತನ್ನ ಪತಿಯನ್ನು ಹೊಡೆಯುತ್ತಿರುವುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಶನಿವಾರ ಸಂಜೆ ಉರೈ ಕೊಟ್ವಾಲಿ ಪ್ರದೇಶದ ಚುರ್ಖಿ ರಸ್ತೆಯಲ್ಲಿ ನಡೆದ ಈ ಘಟನೆಯನ್ನು ಅಲ್ಲೇ ಇದ್ದವರು ವಿಡಿಯೋದಲ್ಲಿ ಸೆರೆಹಿಡಿದಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ